ಬೆಂಗಳೂರು: ಈಗಾಗಲೇ ಶಾಲೆಗಳು ಆರಂಭವಾಗಿದೆ. ಮಕ್ಕಳು ತರಗತಿಗಳಿಗೆ ಹೋಗುತ್ತಿದ್ದಾರೆ. ಪಠ್ಯ ಪುಸ್ತಕ, ಯೂನಿಫಾರ್ಮ್ ವಿಚಾರದ ಜೊತೆಗೆ ಹೈಸ್ಕೂಲ್ ಮಕ್ಕಳಿಗೆ ಶಿಕ್ಷಣದ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. ಶಾಲೆಯಲ್ಲಿ ಮೊಟ್ಟೆ ನೀಡುವ ಬಗ್ಗೆ ಮಾತನಾಡಿದ್ದು, ಹೈಸ್ಕೂಲ್ ಮಕ್ಕಳಿಗೂ ಮೊಟ್ಟೆ ನೀಡುವ ವಿಚಾರವಾಗಿ ಮಾತನಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ವರ್ಷಕ್ಕೆ 42 ಬಾರಿ ಮೊಟ್ಟೆ ನೀಡುವ ನಿಯಮ ರೂಪಿಸಿತ್ತು. ಮಕ್ಕಳಿಗೆ ಹೆಚ್ಚು ಎಂದರೆ ಎರಡೆರಡು ಮೊಟ್ಟೆ ನೀಡಿತ್ತು. ನಿಯಮದ ಪ್ರಕಾರ ಮಕ್ಕಳಿಗೆ ವಾರಕ್ಕೊಂದು ಮೊಟ್ಟೆ ನೀಡಬೇಕು. ಮೋದಲು ನೀಡಬೇಕಾದ ಒಂದು ಮೊಟ್ಟೆಯಾದರೂ ನೀಡಿ ಎಂದು ಹೇಳಿದ್ದೇನೆ. ಇನ್ನು ಎರಡು ಮೊಟ್ಟೆ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಈ ಮುಂಚೆ ಬರೀ8ನೇ ತರಗತಿವರೆಗೆ ಮಾತ್ರ ಮೊಟ್ಟೆ ನೀಡುವ ನಿಯಮವಿತ್ತು. ಆದರೆ ನಾನು 9 & 10ನೇ ತರಗತಿವರೆಗೆ ಮೊಟ್ಟೆ ನೀಡಬೇಕೆಂದು ಸಿಎಂ ಬಳಿ ಮನವಿ ಮಾಡಿದ್ದೇನೆ.
ನಾನು ಶಿಕ್ಷಣ ಸಚಿವನಾಗಿ ಅಧಿಕಾರ ವಹಿಸಿಕೊಂಡಿದ್ದು ಒಟ್ಟಿಗೆ ಆಯ್ತು. ಹೀಗಾಗಿ ಆದಷ್ಟು ಬೇಗ ಎಲ್ಲವನ್ನು ಸರಿ ಮಾಡುತ್ತೇನೆ. 150 ಪೇಜ್ ಪಠ್ಯಪುಸ್ತಕ ಪರಿಷ್ಕರಣೆ ಆಗಲಿದೆ. ಇದಕ್ಕೆ 20 ಲಕ್ಷ ರೂಪಾಯಿ ಬಜೆಟ್ ಬೇಕು. ಈ ಬಗ್ಗೆ ಕ್ಯಾಬಿನೆಟ್ ಮೀಟಿಂಗ್ನಲ್ಲಿ ಮಾತಾಡಿದ್ದೇವೆ. ಇನ್ನು, 10 ದಿನಗಳಲ್ಲಿ ಪುಸ್ತಕಗಳು ಹೋಗಬೇಕು. ಅದಕ್ಕಾಗಿ ಸಮಿತಿ ಮಾಡಿ ಬೇರೆ ನಿಯಮ ಮಾಡಬೇಕು ಎಂದುಕೊಂಡಿದ್ದೇನೆ ಎಂದರು.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…