Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಈ ಬಾರಿ ಡಿಕೆಶಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಕಾರಣವೇನು..?

ಡಿಕೆ ಶಿವಕುಮಾರ್
---Advertisement---

ರಾಜಕಾರಣಿಗಳ ಹುಟ್ಟುಹಬ್ಬ ಬಂತು ಅಂದ್ರೆ ಸಾಕು ಬೆಂಬಲಿಗರು, ಅಭಿಮಾನಿಗಳು ಕಾದು ಕೂರುತ್ತಾರೆ. ಹಲವು ದಿನಗಳ ಮೊದಲೇ ಯೋಜನೆಯನ್ನು ಹಾಕಿಕೊಳ್ಳುತ್ತಾರೆ. ಫ್ಲೆಕ್ಸ್, ಬ್ಯಾನರ್ ಹಾಕಿಸುತ್ತಾರೆ. ಬರ್ತ್ ಡೇ ಸೆಲೆಬ್ರೇಷನ್ ಮಾಡುವುದಕ್ಕೆ ಕಾಯ್ತಾ ಇರ್ತಾರೆ. ಆದರೆ ಈ ಬಾರಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಬಲಿಗರಿಗೆ ನಿರಾಸೆ ಮೂಡಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಯಾರೂ ಫ್ಲೆಕ್ಸ್, ಬ್ಯಾನರ್ ಕೂಡ ಹಾಕಬಾರದು ಎಂದು ಮನವಿ ಮಾಡಿದ್ದಾರೆ.

ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಸಂದರ್ಭವಿದು. ಹೀಗಾಗಿ ಮೇ 15ರಂದು ಯಾರೂ ನನ್ನ ಜನ್ಮದಿನವನ್ನು ಆಚರಣೆ ಮಾಡುವುದು ಬೇಡ ಎಂದು ವಿನಂತಿ ಮಾಡುತ್ತೇನೆ. ನಿಮ್ಮ ಆಶೀರ್ವಾದ ಸದಾ ಹೀಗೆ ಇರಲಿ, ಅದುವೇ ನನಗೆ ಶ್ರೀರಕ್ಷೆ. ಮೇ 15ರಂದು ನಾನು ಬೆಂಗಳೂರಿನಲ್ಲಿ ಇರಲ್ಲ. ಹೀಗಾಗಿ ಯಾರೂ ನನ್ನ ನಿವಾಸಕ್ಕಾಗಲೀ, ಕಚೇರಿ ಬಳಿಯಾಗಲಿ ಬರಬೇಡಿ. ಯಾರೂ ಇದನ್ನು ಅನ್ಯತಾ ಭಾವಿಸಬೇಡಿ. ಜನ್ಮ ದಿನದ ಪ್ರಯುಕ್ತ ಫ್ಲೆಕ್ಸ್, ಬ್ಯಾನರ್ ಹಾಕಬೇಡಿ, ಜಾಹೀರಾತು ನೀಡಬೇಡಿ. ಇರುವ ಜಾಗದಿಂದಾನೇ ಹಾರೈಸಿ ಎಂದಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಅವರು ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳದೆ ಇರುವುದಕ್ಕೆ ಕಾರಣವೂ ಇದೆ. ಪೆಹಲ್ಗಾಮ್ ನಲ್ಲಿ ಅಟ್ಯಾಕ್ ಆದ ಮೇಲೆ ಪಾಕ್ ವಿರುದ್ಧ ದಾಳಿ ನಡೆಯುತ್ತಿದೆ. ಹೀಗಾಗಿ ನಮ್ಮ ಸೈನಿಕರು ಯುದ್ದದ ಮನಸ್ಥಿತಿಯಲ್ಲಿರುವಾಗ ನಾವೇಗೆ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವುದು ಎಂಬ ಭಾವನೆ. ಹಾಗೇ ಯಾರೂ ನನ್ನ ಹುಟ್ಟುಹಬ್ಬವನ್ನ ಆಚರಿಸಬೇಡಿ ಎಂದು ಮನವಿ ಕೂಡ ಮಾಡಿದ್ದಾರೆ. ಅವರ ಬೆಂಬಲಿಗರು ಯಾವ ರೀತಿ ವಿಶ್ ಮಾಡ್ತಾರೆ ಎಂಬುದನ್ನು ನೋಡಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment