HDK ನೇತೃತ್ವದ ಸಮ್ಮಿಶ್ರ ಸರ್ಕಾರ ಉರುಳಲು ಕಾರಣವೇನು..? ಸುಧಾಕರ್ ಟ್ವೀಟ್ ಮಾಡಿದ ಅರ್ಥವೇನು..?

suddionenews
1 Min Read

 

ಚಿಕ್ಕಬಳ್ಳಾಪುರ: 2018ರ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಕ್ಕಿರಲಿಲ್ಲ. ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆ ಮಾಡಿತ್ತು. ಅದು ಆರು ತಿಂಗಳಿಗೆ ಉರುಳಿತ್ತು. ಈ ಬಗ್ಗೆ ಮಾಜಿ ಸಚಿವ ಸುಧಾಕರ್ ಟ್ವೀಟ್ ಮಾಡುವ ಮೂಲಕ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

“2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.

2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು.

ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ?” ಎಂದು ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *