Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ಪ್ರತಿಭಟನೆ : ಸಮಸ್ಯೆ ಬಗೆಹರಿಯುವ ತನಕ ತರಗತಿ ಬಹಿಷ್ಕಾರ…!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಆ.31 :  ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕಾಲೇಜಿಲ್ಲದ ಹಿನ್ನಲೆ ಸದ್ಯಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ತರಗತಿ ಬಹಿಷ್ಕರಿಸಿ ಸುಮಾರು 120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಚಿತ್ರದುರ್ಗ ಜಿಲ್ಲಾಸ್ಪತ್ರೆ ಸುಪರ್ದಿಯಲ್ಲಿರುವ ಕಾಲೇಜು ಇದಾಗಿದ್ದು, 2022ರಲ್ಲಿ ಮಂಜೂರಾದ ಕಾಲೇಜಿಗೆ ತರಗತಿ ನಡೆಸಲು ಈವರೆಗೂ ಕಟ್ಟಡವೇ ಇಲ್ಲ. ಪ್ರಸ್ತುತ ANM ವಿದ್ಯಾರ್ಥಿನಿಯರ ಹಾಸ್ಟೆಲ್ ನ 2 ಕೊಠಡಿಯಲ್ಲಿ ತರಗತಿ ನಡೆಸಲಾಗುತ್ತಿದೆ. ಇಲ್ಲಿ ಸುಸಜ್ಜಿತ ಕೊಠಡಿ ,ಲ್ಯಾಬ್, ಲೈಬ್ರರಿ ಶೌಚಾಲಯ ಸೇರಿದಂತೆ ನರ್ಸಿಂಗ್ ಕಾಲೇಜಿಗೆ ಇರಬೇಕಾದ ಯಾವುದೇ ಮೂಲಭೂತ ಸೌಕರ್ಯಗಳು ಇಲ್ಲದಿರುವುದರಿಂದ  ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.

ತರಗತಿಗಳು ನಡೆಯುವ ಕೊಠಡಿಯಲ್ಲಿ ಹಳೆಯ ಪೀಠೋಪಕರಣಗಳು ಸೇರಿದಂತೆ ಹಳೆ ವಸ್ತುಗಳನ್ನು ಇಟ್ಟಿರುವುದರಿಂದ ಇದೊಂದು ರೀತಿಯ ದನದ ದೊಡ್ಡಿಯಂತಾಗಿದೆ. ನಮಗೆ ಪಾಠ ಕೇಳಲು ತೊಂದರೆಯಾಗುತ್ತಿದೆ. ಮಳೆ ಬೀಳುವ ಸಂದರ್ಭದಲ್ಲಿ ಸೋರುತ್ತದೆ. ಅಷ್ಟೇ ಅಲ್ಲದೇ ವಿದ್ಯಾರ್ಥಿನಿಯರಿಗೆ ಶೌಚಾಲಯ ಸೇರಿದಂತೆ ಯಾವುದೇ ರೀತಿಯ ಸೂಕ್ತವಾದ ಸೌಲಭ್ಯಗಳಿಲ್ಲ. ವಿದ್ಯಾರ್ಥಿಗಳು ಶೌಚಾಲಯದ ಸಮಸ್ಯೆ ಹೇಳಿದರೆ ಆಸ್ಪತ್ರೆಯ ವಾರ್ಡ್ ಗಳಿಗೆ ಹೋಗಿ ಎಂದು ಉಡಾಫೆ ಉತ್ತರ ನೀಡುತ್ತಾರೆ ಎಂದು ಹೇಳಿದರು.

ಕಳೆದ ಎರಡು ವರ್ಷದಿಂದಲೂ ನಾವು ಇದೇ ಪರಿಸ್ಥಿತಿಯನ್ನು ಅನುಭವಿಸುತ್ತಿದ್ದು ಸಾಕಷ್ಟು ಬಾರಿ, ಜಿಲ್ಲಾ ಸರ್ಜನ್, ಜಿಲ್ಲಾಧಿಕಾರಿ, ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು,  ಆರೋಗ್ಯ ಸಚಿವರು ಹೀಗೆ ಎಲ್ಲರಿಗೂ ಮನವಿ ಮಾಡಿದರೂ ಯಾರಿಂದಲೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ನಮಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳು ಒದಗಿಸಿಲ್ಲ. ನಮ್ಮ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ.

ಮೆಡಿಕಲ್ ಕಾಲೇಜಿಗಾಗಿ ಇಷ್ಟೆಲ್ಲ ವ್ಯವಸ್ಥೆ ಮಾಡುತ್ತಿರುವ ಸರ್ಕಾರ ನರ್ಸಿಂಗ್ ವಿದ್ಯಾರ್ಥಿಗಳಿಗೆ ಈ ರೀತಿಯ ತಾರತಮ್ಯ ಏಕೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಎಲ್ಲಾ ಕಾರಣದಿಂದಾಗಿ ನಮಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವವರೆಗೂ ನಾವು ತರಗತಿಗಳಿಗೆ ಹಾಜರಾಗುವುದಿಲ್ಲ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಹೇಳಿದರು ಇಂದು ಸಂಜೆ 5:00 ವರೆಗೂ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ಎಂದು ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡರು.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಎಸಿ ಕಾರ್ತಿಕ್ ಅವರು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ ವಸತಿ ನಿಲಯದ ಒಳಗಿರುವ ತರಗತಿಗಳು ನಡೆಯುವ ಕೊಠಡಿ, ಶೌಚಾಲಯ ಸೇರಿದಂತೆ ಸುತ್ತಮುತ್ತಲಿನ ಪರಿಸರವನ್ನು ವೀಕ್ಷಿಸಿದ ನಂತರ ಮಾಧ್ಯಮಮದವರೊಂದಿಗೆ ಮಾತನಾಡಿದರು.

ಇಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದ ಕೆಲವು ಬೇಡಿಕೆಗಳನ್ನು ಇಟ್ಟಿದ್ದಾರೆ.ನಾವೆಲ್ಲಾ ಅಧಿಕಾರಿಗಳು ಅವರ ಸಮಸ್ಯೆಗಳನ್ನು ಕೇಳಿ, ಒಳಗೆ ಹೋಗಿ ನೋಡಿಕೊಂಡು ಬಂದಿದ್ದೇವೆ. ಪ್ರಾಂಶುಪಾಲರಿಗೆ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಗಳ ಪಟ್ಟಿಯನ್ನು ಮಾಡಲು ತಿಳಿಸಿದ್ದೇವೆ. ಜಿಲ್ಲಾಧಿಕಾರಿಯವರೊಂದಿಗೆ ಈ ಕುರಿತು ಚರ್ಚೆ ನಡೆಸಿ ತಕ್ಷಣವೇ ಏನು ಮಾಡಬೇಕು ಆ ವ್ಯವಸ್ಥೆ ಮಾಡುತ್ತೇವೆ.

ಈಗಾಗಲೇ ಮೆಡಿಕಲ್ ಕಾಲೇಜು ಆರಂಭವಾಗುತ್ತಿದ್ದು, ಅದರಲ್ಲಿಯೇ ಎಲ್ಲಾ ವ್ಯವಸ್ಥೆಗಳನ್ನು ಕಾರ್ಯರೂಪಕ್ಕೆ ತರಲಾಗುತ್ತದೆ. ಆದರೆ ಇದು ದೀರ್ಘ ಕಾಲದ ಸಮಯ ತೆಗೆದುಕೊಳ್ಳುತ್ತದೆ. ಆದರೂ ಕೂಡಾ ನಾವು ಈ ತಕ್ಷಣವೇ ಪರ್ಯಾಯವಾಗಿ ಅವರಿಗೆ ಬೇಕಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುತ್ತೇವೆ. ನಮ್ಮ ಗಮನಕ್ಕೆ ಈಗ ಬಂದಿದೆ. ನಾವೂ ಕಾಡಾ ಎಲ್ಲಾ ಪರಿಶೀಲನೆ ಮಾಡಿರುವುದರಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳತ್ತೇವೆ ಎಂದರು.

ಈ ಸಂದರ್ಭದಲ್ಲಿ ತಹಶಿಲ್ದಾರ್ ನಾಗವೇಣಿ, DHO ರಂಗನಾಥ್, ಡಿಎಸ್ ಡಾ. ದೇವರಾಜ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿದ್ಧರಾಮಯ್ಯ ಅವರನ್ನು ಕೆಣಕಿದ್ದಕ್ಕೆ ಜನ ತಕ್ಕ ಉತ್ತರ : ಮಾಜಿ ಸಚಿವ ಎಚ್.ಆಂಜನೇಯ

  ಸುದ್ದಿಒನ್, ಚಿತ್ರದುರ್ಗ, ನ. 23 : ಸಿದ್ದರಾಮಯ್ಯ ನಾಡು ಕಂಡ ಅಪರೂಪದ ನಾಯಕ, 40 ವರ್ಷ ನಿಷ್ಕಳಂಕ ರಾಜಕಾರಣ ಮಾಡಿದ ಮುತ್ಸದ್ಧಿ. ಆದರೆ, ಅವರ ಹೆಸರಿಗೆ ಕಳಂಕ ತರಲು ಅನಗತ್ಯವಾಗಿ ಮುಡಾ ವಿಷಯ

ಬಿಜೆಪಿಗೆ ಹೀನಾಯ ಸೋಲು : ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಸೋಲು

ಸುದ್ದಿಒನ್, ಬೆಂಗಳೂರು, ನವೆಂಬರ್.23 : ಕರ್ನಾಟಕದಲ್ಲಿ ನಡೆದ ಎಲ್ಲಾ ಮೂರು ವಿಧಾನಸಭಾ ಉಪಚುನಾವಣೆಗಳಾದ ಶಿಗ್ಗಾಂವ್, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇಬ್ಬರು ಬಿಜೆಪಿ ಅಭ್ಯರ್ಥಿಗಳು ಮತ್ತು ಜೆಡಿಎಸ್ ಅಭ್ಯರ್ಥಿಯನ್ನು ಮತದಾರ

ರೈತ ವಿರೋಧಿ ನೀತಿ ಖಂಡಿಸಿ ನವೆಂಬರ್ 26 ರಂದು ಪ್ರತಿಭಟನೆ : ಜೆ.ಯಾದವರೆಡ್ಡಿ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 23 : ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ, ಸಂಯಕ್ತ ಹೋರಾಟ-ಕರ್ನಾಟಕ ವತಿಯಿಂದ ನ.26 ರಂದು ಜಿಲ್ಲಾಧಿಕಾರಿ

error: Content is protected !!