Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಎದುರು  ಪ್ರತಿಭಟನೆ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿಗೆ ಕಾರಣವೇನು ?

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.20: ಪ್ರಜಾಪ್ರಭುತ್ವ ಸಾಮಾನ್ಯ ನಾಗರೀಕರ ಹೋರಾಟ ಸಮಿತಿಯವರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಕೆಲವು ನಿಮಿಷಗಳ ಕಾಲ ಮಾತಿನ ಜಟಾಪಟಿ ನಡೆಯಿತು.

ಕಾಲಿಲ್ಲದೆ ನೆಲದಲ್ಲಿ ತೆವಳುವವರು, ತ್ರಿಚಕ್ರ ವಾಹನದಲ್ಲಿ ಬಂದವರು, ಅಂಧರನ್ನು ಜಿಲ್ಲಾಧಿಕಾರಿ ಕಚೇರಿ ಆವರಣದೊಳಗೆ ಬಿಡದೆ ಬ್ಯಾರಿಕೇಡ್‍ಗಳನ್ನು ಅಡ್ಡವಿಟ್ಟು ಪೊಲೀಸರು ತಡೆದಾಗ ಪ್ರತಿಭಟನಾಕಾರರಿಗೆ ಬೆಂಬಲವಾಗಿ ಬಂದಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ವಿಕಲಚೇತನರಿಗೆ ವಿಶೇಷ ಆದ್ಯತೆ ನೀಡಿ ಅವರ ಕಷ್ಟ-ಸಮಸ್ಯೆಗಳನ್ನು ಆಲಿಸಬೇಕಾಗಿರುವ ನೀವುಗಳೆ ಈ ರೀತಿ ಹೀನಾಯವಾಗಿ ನಡೆಸಿಕೊಂಡರೆ ಇನ್ನು ಯಾರ ಬಳಿ ಹೋಗಿ ಅವರು ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು. ಮನುಷ್ಯತ್ವವಿರುವ ಯಾರು ಈ ರೀತಿ ನಡೆದುಕೊಳ್ಳುವುದಿಲ್ಲ ಎಂದು ಏರುಧ್ವನಿಯಲ್ಲಿ ಪ್ರಶ್ನಿಸಿದರು?

ಜಿಲ್ಲಾಡಳಿತ ಅಂಗವಿಕಲರನ್ನು ನಿರ್ಲಕ್ಷೆಯಿಂದ ಕಾಣಬಾರದು. ಕನಿಷ್ಟಪಕ್ಷ ನೆರಳಿನಲ್ಲಾದರೂ ಕೂರಲು ಅವಕಾಶಮಾಡಿಕೊಡಬೇಕು. ವಿಕಲಚೇತನರೆಂದರೆ ಉಗ್ರಗಾಮಿಗಳು, ಭಯೋತ್ಪಾದಕರಲ್ಲ. ಮೊದಲು ಮಾನವೀಯತೆಯಿಂದ ನಡೆದುಕೊಳ್ಳುವುದನ್ನು ಕಲಿಯಿರಿ ಎಂದು ತಾಕೀತು ಮಾಡಿದರು.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರ ಖಾಸಗಿರಕರಣವನ್ನು ರದ್ದುಗೊಳಿಸಿ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಅಕ್ಕಪಕ್ಕ ರಾಜ್ಯಗಳಲ್ಲಿ ಗೃಹರಕ್ಷಕ ದಳದವರನ್ನು ಸರ್ಕಾರಿ ನೌಕರರನ್ನಾಗಿ ನೇಮಕ ಮಾಡಿಕೊಂಡಿರುವಂತೆ ನಮ್ಮ ರಾಜ್ಯದಲ್ಲಿಯೂ ಹೋಂಗಾರ್ಡ್‍ಗಳನ್ನು ಖಾಯಂಗೊಳಿಸಬೇಕು.

ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿರುವವರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಒಟ್ಟು ಒಂಬತ್ತು ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ನೀಡಿದರು.

ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ವಿಶ್ವನಾರಾಯಣಮೂರ್ತಿ, ಅಂಗವಿಕಲ ಜೈಪ್ರಕಾಶ್, ಅನೇಕ ಅಂಧರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!