ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.20: ಪ್ರಜಾಪ್ರಭುತ್ವ ಸಾಮಾನ್ಯ ನಾಗರೀಕರ ಹೋರಾಟ ಸಮಿತಿಯವರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಕೆಲವು ನಿಮಿಷಗಳ ಕಾಲ ಮಾತಿನ ಜಟಾಪಟಿ ನಡೆಯಿತು.
ಕಾಲಿಲ್ಲದೆ ನೆಲದಲ್ಲಿ ತೆವಳುವವರು, ತ್ರಿಚಕ್ರ ವಾಹನದಲ್ಲಿ ಬಂದವರು, ಅಂಧರನ್ನು ಜಿಲ್ಲಾಧಿಕಾರಿ ಕಚೇರಿ ಆವರಣದೊಳಗೆ ಬಿಡದೆ ಬ್ಯಾರಿಕೇಡ್‍ಗಳನ್ನು ಅಡ್ಡವಿಟ್ಟು ಪೊಲೀಸರು ತಡೆದಾಗ ಪ್ರತಿಭಟನಾಕಾರರಿಗೆ ಬೆಂಬಲವಾಗಿ ಬಂದಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ವಿಕಲಚೇತನರಿಗೆ ವಿಶೇಷ ಆದ್ಯತೆ ನೀಡಿ ಅವರ ಕಷ್ಟ-ಸಮಸ್ಯೆಗಳನ್ನು ಆಲಿಸಬೇಕಾಗಿರುವ ನೀವುಗಳೆ ಈ ರೀತಿ ಹೀನಾಯವಾಗಿ ನಡೆಸಿಕೊಂಡರೆ ಇನ್ನು ಯಾರ ಬಳಿ ಹೋಗಿ ಅವರು ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು. ಮನುಷ್ಯತ್ವವಿರುವ ಯಾರು ಈ ರೀತಿ ನಡೆದುಕೊಳ್ಳುವುದಿಲ್ಲ ಎಂದು ಏರುಧ್ವನಿಯಲ್ಲಿ ಪ್ರಶ್ನಿಸಿದರು?
ಜಿಲ್ಲಾಡಳಿತ ಅಂಗವಿಕಲರನ್ನು ನಿರ್ಲಕ್ಷೆಯಿಂದ ಕಾಣಬಾರದು. ಕನಿಷ್ಟಪಕ್ಷ ನೆರಳಿನಲ್ಲಾದರೂ ಕೂರಲು ಅವಕಾಶಮಾಡಿಕೊಡಬೇಕು. ವಿಕಲಚೇತನರೆಂದರೆ ಉಗ್ರಗಾಮಿಗಳು, ಭಯೋತ್ಪಾದಕರಲ್ಲ. ಮೊದಲು ಮಾನವೀಯತೆಯಿಂದ ನಡೆದುಕೊಳ್ಳುವುದನ್ನು ಕಲಿಯಿರಿ ಎಂದು ತಾಕೀತು ಮಾಡಿದರು.
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರ ಖಾಸಗಿರಕರಣವನ್ನು ರದ್ದುಗೊಳಿಸಿ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಅಕ್ಕಪಕ್ಕ ರಾಜ್ಯಗಳಲ್ಲಿ ಗೃಹರಕ್ಷಕ ದಳದವರನ್ನು ಸರ್ಕಾರಿ ನೌಕರರನ್ನಾಗಿ ನೇಮಕ ಮಾಡಿಕೊಂಡಿರುವಂತೆ ನಮ್ಮ ರಾಜ್ಯದಲ್ಲಿಯೂ ಹೋಂಗಾರ್ಡ್‍ಗಳನ್ನು ಖಾಯಂಗೊಳಿಸಬೇಕು.
ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿರುವವರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಒಟ್ಟು ಒಂಬತ್ತು ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ನೀಡಿದರು.
ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ವಿಶ್ವನಾರಾಯಣಮೂರ್ತಿ, ಅಂಗವಿಕಲ ಜೈಪ್ರಕಾಶ್, ಅನೇಕ ಅಂಧರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…