ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ. 2026-27ನೇ ಸಾಲಿನ ಬಜೆಟ್ ಗಾತ್ರ ಸುಮಾರು 448004 ಲಕ್ಷ ಕೋಟಿಯದ್ದಾಗಿದೆ. ಇದರಲ್ಲಿ ಹಲವು ಕ್ಷೇತ್ರಗಳಿಗೆ ಅನುದಾನವನ್ನು ನೀಡಿದ್ದಾರೆ. ಅದರಲ್ಲಿ ಶಿಕ್ಷಣ ಕ್ಷೇತ್ರಕ್ಕೆ 47,224 ಕೋಟಿ ರೂಪಾಯಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,929 ಕೋಟಿ ರೂಪಾಯಿ, ಇಂಧನ ಇಲಾಖೆಗೆ 29,947 ಕೋಟಿ ರೂಪಾಯಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ 26,559 ಕೋಟಿ ರೂಪಾಯಿ.
ಲೋಕೋಪಯೋಗಿ ಮತ್ತು ಸಾರಿಗೆ ಇಲಾಖೆಗೆ 23,100 ಕೋಟಿ ರೂಪಾಯಿ, ನೀರಾವರಿ ಇಲಾಖೆಗೆ 22,436 ಕೋಟಿ, ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ 22.203 ಕೋಟಿ, ಕಂದಾಯ ಇಲಾಖೆಗೆ 19,843 ಕೋಟಿ, ಸಮಾಜ ಕಲ್ಯಾಣ ಇಲಾಖೆಗೆ 18,612 ಕೋಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,817 ಕೋಟಿ, ಒಳಾಡಳಿತ 11,424 ಕೋಟಿ.
ಕೃಷಿ ಮತ್ತು ತೋಟಗಾರಿಕೆಗೆ 8,373 ಕೋಟಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ 4,084 ಕೋಟಿ, ಇತರೆ ವಲಯಗಳಿಗೆ 1,72,757 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಇದರಲ್ಲಿ ಶಿಕ್ಷಣ ಇಲಾಖೆ, ಮಹಿಳಾ ಕಲ್ಯಾಣಕ್ಕಾಗಿಯೇ ಸಿಂಹ ಪಾಲು ಅನುದಾನವನ್ನು ಮೀಸಲಿಡಲಾಗಿದೆ. ಇನ್ನು ಇದೇ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿಯೂ ಬಜೆಟ್ ಮಂಡನೆಯ ನೇರ ಪ್ರಸಾರದ ವ್ಯವಸ್ಥೆಯನ್ನ ಮಾಡಲಾಗಿದೆ.




