Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದರಾಮಯ್ಯ ಸರ್ಕಾರದ ಬಜೆಟ್ ಗಾತ್ರ ಎಷ್ಟು..? ಯಾವ್ಯಾವ ಕ್ಷೇತ್ರಕ್ಕೆ ಎಷ್ಟೆಷ್ಟು ಅನುದಾನ..?

---Advertisement---

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ. 2026-27ನೇ ಸಾಲಿನ ಬಜೆಟ್ ಗಾತ್ರ ಸುಮಾರು 448004 ಲಕ್ಷ ಕೋಟಿಯದ್ದಾಗಿದೆ. ಇದರಲ್ಲಿ ಹಲವು ಕ್ಷೇತ್ರಗಳಿಗೆ ಅನುದಾನವನ್ನು ನೀಡಿದ್ದಾರೆ. ಅದರಲ್ಲಿ ಶಿಕ್ಷಣ ಕ್ಷೇತ್ರಕ್ಕೆ 47,224 ಕೋಟಿ ರೂಪಾಯಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,929 ಕೋಟಿ ರೂಪಾಯಿ, ಇಂಧನ ಇಲಾಖೆಗೆ 29,947 ಕೋಟಿ ರೂಪಾಯಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ 26,559 ಕೋಟಿ ರೂಪಾಯಿ.

ಲೋಕೋಪಯೋಗಿ ಮತ್ತು ಸಾರಿಗೆ ಇಲಾಖೆಗೆ 23,100 ಕೋಟಿ ರೂಪಾಯಿ, ನೀರಾವರಿ‌ ಇಲಾಖೆಗೆ 22,436 ಕೋಟಿ, ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ 22.203 ಕೋಟಿ, ಕಂದಾಯ ಇಲಾಖೆಗೆ 19,843 ಕೋಟಿ, ಸಮಾಜ ಕಲ್ಯಾಣ ಇಲಾಖೆಗೆ 18,612 ಕೋಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,817 ಕೋಟಿ, ಒಳಾಡಳಿತ 11,424 ಕೋಟಿ.

ಕೃಷಿ ಮತ್ತು ತೋಟಗಾರಿಕೆಗೆ 8,373 ಕೋಟಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ 4,084 ಕೋಟಿ, ಇತರೆ ವಲಯಗಳಿಗೆ 1,72,757 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಇದರಲ್ಲಿ ಶಿಕ್ಷಣ ಇಲಾಖೆ, ಮಹಿಳಾ ಕಲ್ಯಾಣಕ್ಕಾಗಿಯೇ ಸಿಂಹ ಪಾಲು ಅನುದಾನವನ್ನು ಮೀಸಲಿಡಲಾಗಿದೆ. ಇನ್ನು ಇದೇ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿಯೂ ಬಜೆಟ್ ಮಂಡನೆಯ ನೇರ ಪ್ರಸಾರದ ವ್ಯವಸ್ಥೆಯನ್ನ ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...