ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಮಾತನಾಡಿದರು ಎಂಬ ಕಾರಣಕ್ಕೆ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಜೊತೆಗೆ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ರಾಹುಲ್ ಗಾಂಧಿ ಮುಂದೇನು ಮಾಡಬಹುದು ಎಂಬ ಬಗ್ಗೆ ತಜ್ಞರು ಉತ್ತರಿಸಿದ್ದಾರೆ.
ರಾಹುಲ್ ಗಾಂಧಿಯವರು ಈ ವಿಚಾರ ಸಂಬಂಧ ಸುಪ್ರೀಂ ಕೋರ್ಟ್ ಗೆ ಹೋಗುವ ಅವಕಾಶವಿದೆ. ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬಹುದು. ಆಗ ಸುಪ್ರೀಂ ಕೋರ್ಟ್ ಅಪರಾಧಿ ಎಂಬ ಎಂಬ ತೀರ್ಪಿಗೆ ತಡೆಯಾಜ್ಞೆ ತರಬಹುದು. ಸುಪ್ರೀಂ ಕೋರ್ಟ್ ನಿಂದ ಆದೇಶ ನೀಡಿದ್ರೆ ಸಂಸದ ಸ್ಥಾನದ ಅನರ್ಹತೆ ಆದೇಶ ಅಸಿಂಧು ಆಗುತ್ತೆ ಅಂತ ಕಾನೂನು ತಜ್ಞರಾದಂತ ಅಶೋಕ್ ಹಾರನಹಳ್ಳಿ ಖಾಸಗಿ ಚಾನೆಲ್ ಒಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ರಾಹುಲ್ ಗಾಂಧಿ ಅವರು ಭಟಷಣ ಮಾಡುವಾಗ ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಸರ್ ನೇಮ್ ಒಂದೇ. ಈ ಎಲ್ಲಾ ಕಳ್ಳರು ದೇಶದ ಲೂಟಿ ಹೊಡೆದಿದ್ದಾರೆ ಎಂದು ಹೇಳಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ.