Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಗ್ಯಕ್ಕೆ ಏನಾಗಿದೆ..?

---Advertisement---

ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ತಮ್ಮ ಆರೋಗ್ಯದ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ತಮ್ಮ ಆರೋಗ್ಯಕ್ಕೆ ಏನು ಸಮಸ್ಯೆ ಆಗಿಲ್ಲ, ನಾನು ಚೆನ್ನಾಗಿನೇ ಇದ್ದೀನಿ ಎಂದು ತಿಳಿಸಿದ್ದಾರೆ. ನಾನು ಆರೋಗ್ಯವಾಗಿ ಗಟ್ಟು ಮುಟ್ಟಾಗಿದ್ದೇನೆ. ಏನು ಚಿಂತೆ ಮಾಡಬೇಡಿ ಎಂದು ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರು, ಅಭಿಮಾನಿಗಳಿಗೆ ಧೈರ್ಯ ತುಂಬಿದ್ದಾರೆ.

ಇದೆ ವೇಳೆ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದು, ಕಾಂಗ್ರೆಸ್ ನವರು ಕುಮಾರಸ್ವಾಮಿ ಆರೋಗ್ಯ ಕೆಟ್ಟಿದೆ. ನಮ್ಮ ಪಕ್ಷಕ್ಕೆ ಬನ್ನಿ ಎಂದು ಕರೆಯಿತ್ತಿದ್ದಾರೆ. ನೀವ್ಯಾರು ಏನು ಚಿಂತೆಯನ್ನ ಮಾಡಬೇಡಿ. ನಾನು ಆರೋಗ್ಯವಾಗಿದ್ದೇನೆ. ಇನ್ನೂ ಹದಿನೈದು ಇಪ್ಪತ್ತು ವರ್ಷ ನಾನು ನಿಮ್ಮ ಜೊತೆಗೆ ಇರುತ್ತೇನೆ. ಜನತಾದಳವೂ ಇರುತ್ತದೆ. ನಮ್ಮ ಪಕ್ಷಕ್ಕೆ ಶಕ್ತಿ ಇದೆ. ಜೆಡಿಎಸ್ ಬಿಟ್ಟು ಬನ್ನಿ ಎನ್ನುವವರಿಗೆ ಈ ಸಭೆಯ ಮೂಲಕ ಉತ್ತರ ಕೊಟ್ಟಿದ್ದೇನೆ ಎಂದಿದ್ದಾರೆ.

ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಧೈರ್ಯವಾಗಿ ಹೊರಡಿ. ಈ ಬಾರಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷವೇ ಬರಲಿದೆ. ಕೈಲಾಗದವರು ಅಪಪ್ರಚಾರ ಮಾಡುತ್ತಾರೆ. ಅವರಿಗೆಲ್ಲ ದಿಟ್ಟ ಉತ್ತರ ಕೊಡೋಣಾ. ನಿಮ್ಮ ಪಾಡಿಗೆ ನೀವೂ ಪಕ್ಷದ ಕೆಲಸ ಮಾಡಿ. ಜೆಡಿಎಸ್ ಮುಗಿದು ಹೋಗಿದೆ. ಪಕ್ಷ ಬಿಟ್ಟು ಬನ್ನಿ ಎಂದು ಸಿಎಂ ಹೇಳುತ್ತಾರಲ್ವಾ..? ಇದನ್ನ ನೋಡಿದರೆ ಅವರಿಗೆ ಉತ್ತರ ಸಿಕ್ಕಂತೆ ಕಾಣಿಸುತ್ತದೆ. ಮೈತ್ರಿಯಲ್ಲಿ ಗೊಂದಲ ಇಲ್ಲ. ಸೀಟು ತರೋದು ನನ್ನ ಜವಾಬ್ದಾರಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಕುಮಾರಸ್ವಾಮಿ ಅವರು ಅನಾರೋಗ್ಯಕ್ಕೆ ಈಡಾಗುತ್ತಿರುತ್ತಾರೆ. ಹೀಗಾಗಿ ಅವರ ಅಭಿಮಾನಿಗಳು, ಬೆಂಬಲಿಗರು ಆತಂಕದಿಂದ ಇದ್ದಾರೆ‌. ಅವರಿಗೆಲ್ಲ ಇಂದು ಕುಮಾರಸ್ವಾಮಿ ಅವರೇ ಧೈರ್ಯ ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment