Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಾತಿ ಗಣತಿ ವರದಿ ಮೂಲಪ್ರತಿ ಕಳವು ಆರೋಪಕ್ಕೆ ಸಿದ್ದರಾಮಯ್ಯ ಕೊಟ್ಟ ಉತ್ತರವೇನು..?

---Advertisement---

 

ಬೆಂಗಳೂರು; ರಾಜ್ಯದಲ್ಲಿ ಸದ್ಯಕ್ಕೆ ಜಾತಿ ಗಣತಿ ವರದಿಯ ವಿಚಾರವೇ ಸಾಕಷ್ಟು ಚರ್ಚೆಯಾಗುತ್ತಿದೆ. ಇದೀಗ ವಿರೋಧ ಪಕ್ಷದ‌ ನಾಯಕರು ಮೂಲಪ್ರತಿಯೇ ಕಳೆದುಹೋಗಿದೆ ಎಂದು ಆರೋಪ ಮಾಡಿದ್ದಾರೆ. ಅದರಲ್ಲೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮೂಲಪ್ರತಿ ಸಿದ್ದರಾಮಯ್ಯ ಅವರ ಬಳಿಯೇ ಇದೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಅಶೋಕ್ ಅವರು ಎಂದಾದರೂ ಸತ್ಯವನ್ನ ಹೇಳಿದ್ದಾರಾ..? ಮೂಲ ಪ್ರತಿ ನನ್ನ ಬಳಿ ಇರುವುದಕ್ಕೆ ಹೇಗೆ ಸಾಧ್ಯ..? ರಾಹುಲ್ ಗಾಂಧಿಯಾವರಿಗೆ ನಾನು ಯಾವುದೇ ಪತ್ರ ಬರೆದಿಲ್ಲ. ಆದರೆ ಅವರ ಜೊತೆಗೆ ಚರ್ಚೆ ಮಾಡಿನೆ ಸಚಿವ ಸಂಪುಟ ಸಭೆಯಲ್ಲಿ ಮಂಡನೆ ಮಾಡಿದ್ದೇವೆ. ಸಚಿವ ಸಂಪುಟ ಸಭೆಯಲ್ಲಿ ಯಾರೂ ಕೂಡ ಈ ಬಗ್ಗೆ ಜೋರಾಗಿ ಮಾತನಾಡಿಲ್ಲ. ಸಮೀಕ್ಷೆಯನ್ನು ಸರಿಯಾಗಿ ಓದಿಕೊಂಡು ಅಭಿಪ್ರಾಯಗಳನ್ನು ತಿಳಿಸುವಂತೆ ಸೂಚಿಸಲಾಗಿದೆ.

ಸಚಿವರು ಅಭಿಪ್ರಾಯ ತಿಳಿಸಿದ ನಂತರ ಮತ್ತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು. ಯಾವ ಜಾತಿಗೂ ಅನ್ಯಾಯವಾಗಬಾರದು ಎನ್ನುವುದು ನಮ್ಮ ಸರ್ಕಾರದ ಉದ್ದೇಶ. ಇದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ. ಸಂವಿಧಾನ ಜಾರಿಯಾಗಿ 75 ವರ್ಷಗಳಾಗಿದ್ದರೂ ಬಡವ ಬಡವನಾಗಿಯೇ ಉಳಿಯಬೇಕೆ? ಸಮಾನತೆ ಬೇಡವೇ, ಜಾತಿಗೆ ಅಂಟಿಕೊಂಡೇ ಇರಬೇಕೆ? ಹಿಂದುಳಿದವರಿಗೆ, ಮುಸ್ಲಿಂಮರಿಗೆ ಮಾತ್ರವಲ್ಲದೆ ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು, ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ. ಇದು ಸಾಮಾಜಿಕ, ಶೈಕ್ಷಣಿಕ ಗಣತಿಯ ಆಶಯ ಎಂದು ಹೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment