ಕಲ್ಲು ಒಡೆದುಕೊಂಡಿದ್ದವರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತೆ : ಕುಮಾರಸ್ವಾಮಿ ಗರಂ

1 Min Read

 

 

ರಾಮನಗರ: ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಸಂಸದ ಡಿಕೆ ಸುರೇಶ್ ಅವರ ಹೇಳಿಕೆಗೆ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕಲ್ಲು ಒಡೆದುಕೊಂಡಿದ್ದವರನ್ನು ಲೋಕಸಭೆಗೆ ಕಳುಹಿಸದರೆ ಇನ್ನೇನಾಗುತ್ತದೆ ಎಂದಿದ್ದಾರೆ.

ಬಡವರನ್ನು ಲೂಟಿ ಮಾಡಿಕೊಂಡು ಗುಡ್ಡೆ ಹಾಕಿದ್ದಾರೆ. ಅಂಥವರನ್ನು ದೇಶ ಕಟ್ಟು ಅಂತ ಕಳುಹಿಸಿದರೆ ಅವರು ದೇಶ ಕಟ್ಟುತ್ತಾರಾ..? ಅವರ ಸಾಮ್ರಾಜ್ಯ ಕಟ್ಟಿಕೊಳ್ಳುತ್ತಾರೆ ಅಷ್ಟೇ. ಇಂಥವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ. ಕೇಂದ್ರ ಸರಗಕಾರ ಆರ್ಥಿಕ ತಾರತಮ್ಯ ಮಾಡುತ್ತಿದೆ ಎಂದು ಹೇಳಿರುವುದು ಅಪ್ರಬುದ್ಧ ಹೇಳಿಕೆ. ಕರ್ನಾಟಕದಲ್ಲಿ ಬಿರಿಯಾನಿ ಊಟ ಮಾಡಿ ಭಾರತ್ ಜೋಡೋ ಮಾಡಿದ್ದರು. ಈಗ ವಿಭಜನೆಯ ಮಾತನಾಡುತ್ತಿದ್ದಾರೆ. ಒಂದು ವೇಳೆ ವಿಭಜನೆ ಆಯ್ತು ಅಂತ ಇಟ್ಟುಕೊಳ್ಳಿ, ತಮಿಳುನಾಡಿನಿಂದ ಕಾವೇರಿ ವಿಚಾರದಲ್ಲಿ ನ್ಯಾಯ ಪಡೆಯುವುದಕ್ಕೆ ಸಾಧ್ಯವಾ ಎಂದು ಪ್ರಶ್ನಿಸಿದ್ದಾರೆ‌.

 

ಕೇಂದ್ರ ಸರ್ಕಾರದಿಂದ ನಮ್ಮ ಬೇಡಿಕೆಗಳನ್ನು ಸಂಘರ್ಷದಿಂದ ಪಡೆಯಿವುದಕ್ಕೆ ಸಾಧ್ಯವಿಲ್ಲ. ವಾಸ್ತವವನ್ನು ಅವರಿಗೆ ಮನವರಿಕೆ ಮಾಡಬೇಕು. ಕೇಂದ್ರ ಸರ್ಕಾರದ ಮನವೊಲಿಸಿ ಹಣ ಪಡೆಯಬೇಕು. ಅದನ್ನು ಬಿಟ್ಟು ಇವರ ಬಾಲಿಷ ಹೇಳಿಕೆಗಳಿಂದ ಸಮಸ್ಯೆ ಬಗೆಹರಿಯಲ್ಲ. ದೇಶದ ಮೊದಲ ಬಜೆಟ್ 174 ಕೋಡಿ ಇತ್ತು. ಆಗ ದೇಶದಲ್ಲಿ ಆಹಾರದ ಕೊರತೆ ಇತ್ತು. ಆಗಿನಿಂದಲೂ ಸರ್ಕಾರಗಳು ಬಜೆಟ್ ಮಂಡನೆ ಮಾಡಿಕೊಂಡು ಬಂದಿವೆ. ನಾವೂ ಹಣಕಾಸು ಆಯೋಗಗಳನ್ನು ಮಾಡಿದ್ದೇವೆ. ಅವರು ಎಲ್ಲಾ ರಾಜ್ಯಕ್ಕೂ ಭೇಟಿ ಕೊಟ್ಟು, ಪರಿಶೀಲನೆ ಮಾಡುತ್ತಾರೆ. ಯಾವ ರಾಜ್ಯಕ್ಕೆ ಎಷ್ಟು ಹಣ ನೀಡಬೇಕೆಂದು ವರದಿ ನೀಡುತ್ತವೆ. ಯಾವ ರಾಜ್ಯ ಅಭಿವೃದ್ಧಿ ಆಗಿಲ್ಲ, ಯಾವ ರಾಜ್ಯ ಅಭಿವೃದ್ಧಿ ಆಗಿದೆ ಎಂಬುದನ್ನು ನೋಡಿಕೊಂಡು ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರವನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *