Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನೀನೇನು ಪೂಜಾರಿನಾ ಅಂತ ಕೋರ್ಟ್ ಕೇಳಿದ್ಮೇಲೆ ಏನು ಮಾಡೋದು : ಪ್ರತಾಪ್ ಸಿಂಹ ಬೇಸರ

---Advertisement---

 

ಮೈಸೂರು: ಬಾನು ಮುಷ್ತಾಕ ಅವರು ದಸರಾ ಉದ್ಘಾಟನೆ ಮಾಡುವುದಕ್ಕರ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಪ್ರತಾಪ್ ಸಿಂಹ ಅವರು ಕೋರ್ಟ್ ಮೊರೆ ಹೋಗಿದ್ದರು. ಆದರೆ ಅವರ ಅರ್ಜಿಯನ್ನ ಹೈಕೋರ್ಟ್ ಮಾತ್ರವಲ್ಲ ಸುಪ್ರೀಂ ಕೋರ್ಟ್ ಕೂಡ ವಜಾ ಮಾಡಿದೆ. ಈ ಮೂಲಕ ಪ್ರತಾಪ್ ಸಿಂಹ ಹೋರಾಟಕ್ಕೆ ಸೋಲಾದಂತೆ ಆಗಿದೆ.

ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ ಅವರು, ನಾನು ಬಹಳ ಸ್ಪಷ್ಟವಾಗಿ ಮೊನ್ನೆನೆ ಹೇಳಿಕೆ ಕೊಟ್ಟಿದ್ದೇನೆ. ಹಗಲು ದರೋಡೆ ನಡೆದಂತ ಮೂಡಾದ 14 ಸೈಟುಗಳ ಪ್ರಕರಣವನ್ನೇ ಹೈಕೋರ್ಟ್ ನಲ್ಲಿ ವಜಾ ಮಾಡಲಾಗಿದೆ. ಎಂಡಿ ಸಮೀರ್ ಎಂಬಾತ ಅವಹೇಳನಕಾರಿಯಾಗಿ ವಿಡಿಯೋ ಮಾಡಿ, ಧರ್ಮಸ್ಥಳದ ಬಗ್ಗೆ ಅಪನಂಬಿಕೆಯನ್ನ ಮೂಡಿಸಿದಂತವನಿಗೆ ಮಂಗಳೂರಿನಲ್ಲಿ ನಿರೀಕ್ಷಣಾ ಜಾಮೀನನ್ನ ಕೊಡಲಾಯ್ತು. ಹಾಗೆ ಧರ್ಮಸ್ಥಳಕ್ಕೆ ಜೆಸಿಬಿ ನುಗ್ಗಿಸಿ ಧರ್ಮಸ್ಥಳ ದೇವಸ್ಥಾನವನ್ನು ಹೊಡೆಯಬೇಕೆಂದು ಹೇಳಿದ ಮಹೇಶ್ ತಿಮ್ಮಾರೋಡಿಯ ವಿರುದ್ಧ ಕೇಸ್ ದಾಖಲು ಮಾಡಲಿಲ್ಲ.

ಈ ಎಲ್ಲಾ ಉದಾಹರಣೆಗಳಿದ್ದರು ಕೂಡ ಒಂದು ಭರವಸೆಯೊಂದಿಗೆ ಹೈಕೋರ್ಟ್ ಗೆ ಪಿಐಎಲ್ ಹಾಕಿದ್ದೆ. ಬರೀ ಸೆಕ್ಯುಲರಿಸಂ ಅನ್ನೋ ದುರ್ಬಿನ್ ಹಾಕೊಂಡು ಇಡೀ ಪ್ರಕರಣವನ್ನು ನೋಡಿದ್ರು. ನೀವೂ ಪೂಜಾರಿನಾ ಅಂತಾರೆ. ನಾನು ಪೂಜಾರಿ ಆಗಿರೋದಕ್ಕೆ ಸಾಧ್ಯನಾ ಹೇಳಿ. ಕೋರ್ಟ್ ಕೂಡ ಕೇಳುತ್ತೆ. ಈ ಪ್ರಶ್ನೆ ಮಾಡುವುದಕ್ಕೆ ನೀನು ಪೂಜಾರಿನಾ ಅಂತ ಕೇಳುತ್ತೆ. ಟ್ರಸ್ಟ್ ನಲ್ಲಿ ನೀನು ಇದ್ದೀಯಾ ಅಂತ ಕೇಳುತ್ತೆ. ದಸರಾವನ್ನು ಯಾರು ಉದ್ಘಾಟನರ ಮಾಡಬೇಕು ಎಂಬುದನ್ನ ಮುಖ್ಯಮಂತ್ರಿಗೆ ಬಿಟ್ಟು ಬಿಡ್ತೀವಿ ಅಂತ ತೀರ್ಮಾನ ಮಾಡಿದ್ದಾರೆ ಎಂದು ಪ್ರತಾಪ್ ಸಿಂಹ ಬೇಸರ ವ್ಯಕ್ತಪಡಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...