ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಆರೋಗ್ಯ ಇಲಾಖೆಯ ಸಹಾಯವಾಣಿ

ಬೆಂಗಳೂರು: ಜೀವನದಲ್ಲಿ ಸೋಲು, ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಸೋತವನು ಮತ್ತೊಮ್ಮೆ ಗೆದ್ದೆಗೆಲ್ಲುತ್ತಾನೆ. ಹೀಗಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳು ಏನೇ ಬಂದರೂ ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ಸುಧಾಕರ್ ಹೇಳಿದ್ದಾರೆ.

ಎಸ್ಸೆಎಸ್ಸೆಲ್ಸಿ ಫಲಿತಾಂಶದ ಕುರಿತಾಗಿ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿರುವ ಸಚಿವರು, ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾಗಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶ ನಿರೀಕ್ಷೆಯಲ್ಲಿದ್ದಾರೆ. ಫಲಿತಾಂಶಗಳು ಅಂದುಕೊಂಡ ಹಾಗೇ ಬರಲಿ, ಬಾರದೇ ಇರಲಿ ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಕಳೆದುಕೊಳ್ಳಬಾರದು. ಫಲಿತಾಂಶ ಜೀವನದ ಅಂತ್ಯವಲ್ಲ. ಆರಂಭವೂ ಅಲ್ಲ. ಅದು ಶೈಕ್ಷಣಿಕ ಜೀವನದ ಒಂದು ಪ್ರಕ್ರಿಯೆ ಎಂದು ಹೇಳಿದರು.

ಎಸ್ ಎಸ್ ಎಲ್ ಸಿ ಫಲಿತಾಂಶ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿಮ್ಹಾನ್ಸ್ ಸಹಾಯದೊಂದಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಸಹಾಯವಾಣಿ ತೆರೆದಿದೆ. ಫಲಿತಾಂಶದ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಈ ಮೂಲಕ ಟೆಲಿ ಕೌನ್ಸಿಲಿಂಗ್ ಒದಗಿಸಲಾಗುತ್ತದೆ. ಒತ್ತಡದಲ್ಲಿರುವ ವಿದ್ಯಾರ್ಥಿಗಳು 080-46110007 ಸಂಖ್ಯೆಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು. ಪರೀಕ್ಷೆ ಬರೆದಿರುವ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೂ ಶುಭ ಹಾರೈಕೆಗಳು. ತಂದೆ, ತಾಯಿ, ಗುರು ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯಿರಿ ಎಂದು ಸಚಿವರು ಶುಭ ಹಾರೈಸಿದ್ದಾರೆ

Leave a Reply

Your email address will not be published. Required fields are marked *

error: Content is protected !!