Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಮಮಂದಿರ ತೀರ್ಪು ಬಂದಾಗ ಇಡೀ ದೇಶ ಸ್ವಾಗತಿಸಿದೆ..ಇದೀಗ ಅವರು..: ಯಶವಂತ ಸಿನ್ಹಾ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಎರಡು ದಿನಗಳ ಹಿಂದೆ ಸುಪ್ರೀಂ ಕೋರ್ಟ್ ಬಿಜೆಪಿಯ ಮಾಜಿ ವಕ್ತಾರೆಯ ಬಗ್ಗೆ ತನ್ನ ಅಭಿಪ್ರಾಯ ಹೇಳಿದೆ. ನ್ಯಾಯಾಂಗ ಸಂವಿಧಾನಕ್ಕೆ ಉತ್ತರ ಕೊಡುತ್ತದೆ ರಾಜಕೀಯ ಪಕ್ಷಗಳಿಗೆ ಅಲ್ಲ ಅಂತ ಹೇಳಿರುವುದು ಸ್ವಾಗತಾರ್ಹ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಯಶವಂತ ಸಿನ್ಹಾ ಇಂದಿನ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಇದೆ ವೇಳೆ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪ್ರಕಟಣೆಗಳು ಬರುತ್ತಿರುವುದು ದೇಶದ ದೌರ್ಭಾಗ್ಯ. ರಾಮಮಂದಿರ ತೀರ್ಪು ಬಂದಾಗ ಇಡೀ ದೇಶವೇ ಮೌನವಾಗಿ ಸ್ವಾಗತಿಸಿದೆ. ಈಗ ಅವರ ವಿರುದ್ಧ ತೀರ್ಪು ಬಂದಾಗ ನ್ಯಾಯಾಂಗ ನಿಂದಿಸುವ ಕೆಲಸ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡೆದುಕೊಳ್ಳುವ ಕೆಲಸ ಮಾಡುತ್ತಿದೆ. ಇಡಿ, ಸಿಬಿಐ ಗಳ ಮೂಲಕ ಪ್ರತಿಪಕ್ಷಗಳ ನಾಯಕರನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ಪ್ರತಿಪಕ್ಷಗಳ ಗೌರವಾನ್ವಿತ ನಾಯಕರನ್ನು ಅವಮಾನ ಮಾಡುವ ದೃಷ್ಟಿಯಿಂದ ಇಡಿ ವಿಚಾರಣೆಗೆ ಕರೆಯಲಾಗುತ್ತಿದೆ.

ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ನಡೆದ ಬೆಳವಣಿಗೆ, ಮಧ್ಯಪ್ರದೇಶ, ಕರ್ನಾಟಕ, ರಾಜ್ಯಗಳಲ್ಲಿ ಆಗಿರುವ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ನಾನು ಆಯ್ಕೆಯಾದರೆ ಸಂವಿಧಾನಕ್ಕೆ ಉತ್ತದಾಯಿತ್ವ ಆಗಿದ್ದೇನೆ. ಸಂವಿಧಾನಕ್ಕೆ ಮಾತ್ರ ಉತ್ತರದಾಯಿತ್ವ ಆಗಿದ್ದೇನೆ. ಆಡಳಿತ ಪಕ್ಷದ ಅಭ್ಯರ್ಥಿಯು ಹಾಗೆಯೇ ಇರಬೇಕು ಎಂದು ಬಯಸುತ್ತಿದ್ದೇನೆ. ರಾಷ್ಟ್ರಪತಿ ರಬ್ಬರ್ ಸ್ಟಾಂಪ್ ಆಗಬಾರದು. ಆಡಳಿತ ಪಕ್ಷದ ಅಭ್ಯರ್ಥಿ ಇದನ್ನು ಗಮನಿಸಲಿ.
ರಾಜ್ಯಗಳಲ್ಲಿ ನಡೆಯುತ್ತಿರುವ ಆಪರೇಷನ್ ಕಮಲ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ. ಆಡಳಿತ ಪಕ್ಷದ ಅಭ್ಯರ್ಥಿ ಅದನ್ನು ಪರಿಪಾಲಿಸಲಿ.

ದೇಶದಲ್ಲಿ ಕೋಮು ಧೃವೀಕರಣ ಆಗುತ್ತಿರುವುದನ್ನು ತಡೆಯುವ ಕೆಲಸವಾಗಬೇಕಿದೆ. ಆಡಳಿತ ಪಕ್ಷದ ಅಭ್ಯರ್ಥಿ ಅದನ್ನು ತಡೆಯುವ ಬಗ್ಗೆ ತಮ್ಮ ನಿಲುವು ಪ್ರಕಟಿಸಲಿ. ದುರ್ದೈವ ದೇವೇಗೌಡರ ಭೇಟಿ ಮಾಡುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!