ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಪಾಲಾಗಿದ್ದಾರೆ ನಟ ದರ್ಶನ್. ಇದೀಗ ಕಾನೂನು ಹೋರಾಟ ಮುಂದುವರೆದಿದ್ದು, ದರ್ಶನ್ಗೆ ಜಾಮೀನು ಇನ್ನೂ ದೊರೆತಿಲ್ಲ. ದರ್ಶನ್ ಎಂದು ಬಿಡುಗಡೆ ಆಗುತ್ತಾರೆ ಎನ್ನುವ ಪ್ರಶ್ನೆ ಹಾಗೂ ಚಿಂತೆ ಕುಟುಂಬ ಹಾಗೂ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಇದೀಗ ಕೋಡಿಮಠದ ಶ್ರೀಗಳು ನಟ ದರ್ಶನ್ ಬಗ್ಗೆ ಕೂಡ ಮಾತಾಡಿದ್ದಾರೆ.
ಕೊಲೆ ಆರೋಪಿಯಾಗಿರುವ ನಟ ದರ್ಶನ್ ಭವಿಷ್ಯದ ಬಗ್ಗೆ ಕೋಡಿಮಠದ ಸ್ವಾಮೀಜಿಗಳಿಗೆ ಪ್ರಶ್ನೆ ಕೇಳುತ್ತಿದ್ದಂತೆ, ಈ ಪ್ರಕರಣ ನ್ಯಾಯಾಲಯದಲ್ಲಿದೆ. ಈ ವಿಚಾರ ಕೋರ್ಟ್ನಲ್ಲಿ ತೀರ್ಮಾನ ಆಗುತ್ತೆ.ಈಗ ದರ್ಶನ್ ಬಗ್ಗೆ ಮಾತಾಡಿದ್ರೆ ನ್ಯಾಯಲಯದ ವಿರುದ್ದ ನಾವು ಮಾತನಾಡಿದ ಹಾಗೆ ಆಗುತ್ತೆ. ಹೀಗಾಗಿ ಹೆಚ್ಚು ಮಾತಾಡಲ್ಲ, ದರ್ಶನ್ ಅವರಿಗೆ ದೇವರು ಒಳ್ಳೆಯದನ್ನು ಮಾಡಲಿ ಎಂದಿದ್ದಾರೆ.
ಜೈಲಿಂದ ಹೊರ ಬಂದ ಬಳಿಕ ದರ್ಶನ್ ರಾಜಕೀಯಕ್ಕೆ ಬರ್ತಾರಾ ಎಂಬ ಪ್ರಶ್ನೆಗೆ ಮಾತಾಡಿದ ಕೋಡಿ ಮಠದ ಶ್ರೀಗಳು, ದರ್ಶನ್ ಹೊರ ಬಂದ ಮೇಲೆ ಇದರ ಬಗ್ಗೆ ನೋಡೊಣ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







