Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ಯಾವಾಗಿಂದ ಮಳೆ ಆರಂಭವಾಗಲಿದೆ..? ಹವಮಾನ ಇಲಾಖೆ ಹೇಳಿದ್ದೇನು..?

Facebook
Twitter
Telegram
WhatsApp

 

 

ಬೆಂಗಳೂರು: ಈಗಾಗಲೇ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರು ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ. ಬೀಜ ಬಿತ್ತನೆ ಮಾಡಿ, ಮಳೆಗಾಗಿ ಕಾಯುತ್ತಿದ್ದಾರೆ. ಈ ಮಧ್ಯೆ ಹವಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ.

ಈ ಬಾರಿ ಅಂದುಕೊಂಡಂತೆ ಮುಂಗಾರು ಮಳೆ ಕಾಣಿಸಿಕೊಳ್ಳಲಿಲ್ಲ. ಭಾರತೀಯ ಹವಮಾನ ಸೂಚನೆ ನೀಡಿರುವ ವರದಿಯ ಪ್ರಕಾರ, ಮುಂಗಾರು ಮಳೆ ಸೆಪ್ಟೆಂಬರ್ 1 ರಿಂದ 7 ರ ತನಕ ರಾಜ್ಯಾದ್ಯಂತ ಉತ್ತಮ ಮಳೆಯಾಗಲಿದೆ ಎನ್ನಲಾಗಿದೆ. ಜೂನ್ ನಿಂದ ಇಲ್ಲಿಯವರೆಗೂ ರಾಜ್ಯದಲ್ಲಿ 49.6 ಸೆಂಟಿ ಮೀಟರ್ ಮಳೆಯಾಗಿದೆ. ಅಂದ್ರೆ ವಾಡಿಕೆಗಿಂತ ತೀರಾ ಕಡಿಮೆ‌ ಮಳೆಯಾಗಿದೆ.

ರಾಜ್ಯದಲ್ಲಿ ಸೆಪ್ಟೆಂಬರ್ ನಲ್ಲಿ ಏಳು ದಿನಗಳ ಮಳೆಯಾಗುವುದರಿಂದ 5 ಎಂಎಂ ನಿಂದ 10 ಮೀಮೀ ಮಳೆಯಾಗಲಿದೆ. ಈ ಮೂಲಕ ಒಂದು ವಾರಗಳ ಕಾಲ ಮಳೆಯಾದರೆ ರೈತರು ಕೊಂಚ ಚೇತರಿಸಿಕೊಳ್ಳುವ ಮಟ್ಟಿಗೆ ಭೂಮಿ ಹಸಿಯಾಗುತ್ತದೆ.

ಮಾನ್ಸೂನ್ ಮಾರುತಗಳು ಹಿಮಾಲಯದ ತಪ್ಪಲಿಗೆ ಸ್ಥಳಾಂತರಗೊಂಡಿದೆ. ಇದು ಕರ್ನಾಟಕದಲ್ಲಿ, ವಿಶೇಷವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಕಡಿಮೆಯಾಗಲು ಕಾರಣವಾಗಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಆಂತರಿಕ ಕರ್ನಾಟಕ ಕ್ರಮವಾಗಿ 11% ಮತ್ತು 23% ನಷ್ಟು ಮಳೆ ಕೊರತೆಯಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಮಳೆಯಿಲ್ಲದ ಕಾರಣ ರಾಜ್ಯ ಸರ್ಕಾರ ಬರ ರಾಜ್ಯ ಎಂದು ಘೋಷಣೆ‌ ಮಾಡುವುದಕ್ಕೂ ಸಾಧ್ಯವಾಗಿಲ್ಲ. ಕೇಂದ್ರ ಸರ್ಕಾರದಿಂದ ಕೆಲವು ನಿಯಮಗಳ ಸಡಿಲಿಕೆ ಅಗತ್ಯವಿದೆ. ಇನ್ನು ಹೀಗೆ ಮಳೆ ಆಕಾಶಕ್ಕೆ ಸೇರಿದರೆ ತರಕಾರಿ, ಆಹಾರ ಪದಾರ್ಥಗಳು ಹೆಚ್ಚಾಗುವ ಸಾಧ್ಯತೆ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಉದ್ಯೋಗ ವಾರ್ತೆ | ಅತಿಥಿ ಶಿಕ್ಷಕರ, ಉಪನ್ಯಾಸಕರ ನೇಮಕಕ್ಕೆ ಅರ್ಜಿ

  ಚಿತ್ರದುರ್ಗ. ಮೇ.24:  ಚಿತ್ರದುರ್ಗ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜು, ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಐಪಿಎಲ್ ನಿಂದ ಹೊರಬಿದ್ದ ಮೇಲೆ ಅಭಿಮಾನಿಗಳಿಗಾಗಿ ಪೋಸ್ಟ್ ಹಾಕಿದ ವಿರಾಟ್ ಕೊಹ್ಲಿ

  ಈ ಬಾರಿಯ ಐಪಿಎಲ್ ನಲ್ಲಿ ಆರ್ಸಿಬಿ ಟೀಂ ಆಡಿದ್ದು ನೋಡಿದ್ರೆ ಖಂಡಿತ ಕಪ್ ಗೆದ್ದು ತಂದೇ ತರುತ್ತಾರೆ ಎಂಬ ವಿಶ್ವಾಸ ಎಲ್ಲರಿಗೂ ಮೂಡಿತ್ತು. ಆದರೆ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಎದುರು ಸೋತು,

ಚಿತ್ರದುರ್ಗ | ವಿದ್ಯುತ್ ಬಿಲ್ ಪಾವತಿಸುವ ಕಚೇರಿ ಸ್ಥಳಾಂತರ

ಚಿತ್ರದುರ್ಗ. ಮೇ.24: ನಗರದ ಐಶ್ವರ್ಯ ಪೋರ್ಟ್ ಮುಂದಿನ ಹಳೇ ಬೆವಿಕಂ ಕಾಲೋನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಚೇರಿಯನ್ನು, ನಗರದ ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಆದ್ದರಿಂದ

error: Content is protected !!