Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಖಾಲಿ‌ ಇರುವ ಸರ್ಕಾರಿ ಹುದ್ದೆ ಭರ್ತಿ ಯಾವಾಗ..? ಸಿಎಂ ಹೇಳಿದ್ದೇನು..?

---Advertisement---

ಬೆಂಗಳೂರು: ಸಾಕಷ್ಟು ಜನ ಸರ್ಕಾರಿ ಹುದ್ದೆಗಳಿಗಾಗಿ‌ ಕಾಯುತ್ತಿದ್ದಾರೆ. ಹಲವು ವರ್ಷಗಳಿಂದ ಅದಕ್ಕಾಗಿ ಓದುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಖಾಲಿ ಇರುವ ಹುದ್ದೆಗಳ ಅರ್ಜಿ ಆಹ್ವಾನಕ್ಕೆ ನಿರ್ಧಾರ ಮಾಡಲಾಗಿದೆ.

ಇಂದು ಅಧ್ಯಯನ ಕೇಂದ್ರ ದೇವರಾಜ ಅರಸು ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಿದ್ದರಾಮಯ್ಯ ಅವರು ಮಾತನಾಡಿ, ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನಾವೂ ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದರಂತೆ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳುತ್ತೇವೆ. ಅಲ್ಲಿಯವರೆಗೂ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ತರುವ ಉದ್ದೇಶ ಹೊಂದಿದ್ದೇವೆ ಎಂದಿದ್ದಾರೆ.

ಜಾತಿ-ಧರ್ಮದ ಹೆಸರಲ್ಲಿ ಗಲಭೆಗಳಿಗೆ ಯುವ ಸಮೂಹ ದುರ್ಬಳಕೆ ಆಗುವುದನ್ನು ತಪ್ಪಿಸುವ ರೀತಿಯಲ್ಲಿ ನಮ್ಮ ಸರ್ಕಾರ ನೀತಿ ರೂಪಿಸಿದೆ. ಇದಕ್ಕಾಗಿ ಕೌಶಲ್ಯ ತರಬೇತಿ ಜತೆಗೆ ನಿರುದ್ಯೋಗಿ ಯುವ ಸಮೂಹಕ್ಕೆ 24 ತಿಂಗಳ ಕಾಲ ಯುವನಿಧಿ ನೀಡಲು ನಿರ್ಧರಿಸಿದ್ದೇವೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...