ಬೆಂಗಳೂರು: ಸಾಕಷ್ಟು ಜನ ಸರ್ಕಾರಿ ಹುದ್ದೆಗಳಿಗಾಗಿ ಕಾಯುತ್ತಿದ್ದಾರೆ. ಹಲವು ವರ್ಷಗಳಿಂದ ಅದಕ್ಕಾಗಿ ಓದುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಖಾಲಿ ಇರುವ ಹುದ್ದೆಗಳ ಅರ್ಜಿ ಆಹ್ವಾನಕ್ಕೆ ನಿರ್ಧಾರ ಮಾಡಲಾಗಿದೆ.
ಇಂದು ಅಧ್ಯಯನ ಕೇಂದ್ರ ದೇವರಾಜ ಅರಸು ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಿದ್ದರಾಮಯ್ಯ ಅವರು ಮಾತನಾಡಿ, ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನಾವೂ ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದರಂತೆ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳುತ್ತೇವೆ. ಅಲ್ಲಿಯವರೆಗೂ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ತರುವ ಉದ್ದೇಶ ಹೊಂದಿದ್ದೇವೆ ಎಂದಿದ್ದಾರೆ.
ಜಾತಿ-ಧರ್ಮದ ಹೆಸರಲ್ಲಿ ಗಲಭೆಗಳಿಗೆ ಯುವ ಸಮೂಹ ದುರ್ಬಳಕೆ ಆಗುವುದನ್ನು ತಪ್ಪಿಸುವ ರೀತಿಯಲ್ಲಿ ನಮ್ಮ ಸರ್ಕಾರ ನೀತಿ ರೂಪಿಸಿದೆ. ಇದಕ್ಕಾಗಿ ಕೌಶಲ್ಯ ತರಬೇತಿ ಜತೆಗೆ ನಿರುದ್ಯೋಗಿ ಯುವ ಸಮೂಹಕ್ಕೆ 24 ತಿಂಗಳ ಕಾಲ ಯುವನಿಧಿ ನೀಡಲು ನಿರ್ಧರಿಸಿದ್ದೇವೆ ಎಂದಿದ್ದಾರೆ.