ಬೆಂಗಳೂರು: 2024ಕ್ಕೆ ಹೇಗಾದರೂ ಮಾಡಿ ಮೋದಿಯವರನ್ನು ಸೋಲಿಸಲೇಬೇಕೆಂದು ಪಣ ತೊಟ್ಟಿದ್ದಾರೆ. ಹೀಗಾಗಿಯೇ ಬೆಂಗಳೂರಿನಲ್ಲಿ ದೊಡ್ಡಮಟ್ಟದ ಸಭೆ ನಡೆಸುತ್ತಿದ್ದಾರೆ. ಈ ಸಭೆಯ ನಡುವೆಯೇ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಮೋದಿ ಪ್ರಚಾರಕ್ಕೆ ಹೋದ ಕಡೆಯಲ್ಲೆಲ್ಲಾ ನಾವೂ ಗೆದ್ದಿದ್ದೇವೆ. ಕರ್ನಾಟಕದಲ್ಲಿ ಮೋದಿಯವರನ್ನು ಸಮರ್ಥವಾಗಿ ಎದುರಿಸಿದ್ದೇವೆ. ಸುಮಾರು 24 ವಿಪಕ್ಷಗಳ ನಾಯಕರು ಭಾಗಿಯಾಗುತ್ತಿದ್ದಾರೆ. ಈ ಸಭೆಯಲ್ಲಿ 2024 ಲೋಕಸಭಾ ಚುನಾವಣೆಗೆ ಸಿದ್ಧತೆ ಹೇಗೆ ನಡೆಯಬೇಕು ಎಂಬ ಚರ್ಚೆಯಾಗುತ್ತದೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಲಿದೆ. ಬಿಜೆಪಿಯವರ ಅವನತಿ ಕರ್ನಾಟಕದಿಂದಲೇ ಆರಂಭವಾಗುತ್ತದೆ. ಈ ಬಾರಿ ಸಂಪೂರ್ಣ ಬಹುಮತ ಬಿಜೆಪಿಗೆ ಸಿಗಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.