ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು : ಹಿಂಗಾರು ಮಳೆ ರಾಜ್ಯದಲ್ಲಿ ಜೋರಾಗಿದೆ. ಕಳೆದ ಮೂರು ದಿನಗಳಿಂದಂತು ಬೆಂಬಿಡದೆ ಸುರಿಯುತ್ತಿದೆ. ಇದರಿಂದ ಜನ ಜೀವನವೇನೋ ಅಸ್ತವ್ಯಸ್ತವಾಗಿದೆ. ಹಾಗಾದ್ರೆ ಇನ್ನು ಎಷ್ಟು ದಿನ ಮಳೆ ಹೀಗೆ ಬರಲಿದೆ ಎಂಬುದರ ಮಾಹಿತಿ ಇಲ್ಲಿದೆ.
ಇಂದು ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ವ್ಯಾಪಕವಾಗಿ ಮಳೆಯಾಗಬಹುದು. ಅದರಲ್ಲೂ ಬೆಂಗಳೂರು, ಕೋಲಾರ, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಅತಿಯಾದ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ಉಡುಪಿ ಹಾಗೂ ದಕ್ಷಿಣ ಕನ್ನಡ, ಬೆಳಗಾವಿ, ಧಾರಾವಾಡ, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಚಿತ್ರದುರ್ಗ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆಯ ತಜ್ಞ ಸಿಎಸ್ ಪಾಟೀಲ್ ಹೇಳಿದ್ದಾರೆ.
ನಾಡಿದ್ದಿನಿಂದ ಮಳೆಯ ಪ್ರಮಾಣ ತಗ್ಗಲಿದೆ. ನಿನ್ನೆ ಒಂದೇ ದಿನ ಬೆಂಗಳೂರಿನ ಹಲವು ಭಾಗದಲ್ಲಿ 15 ಸೆಂಟಿಮೀಟರ್, 10 ಸೆಂಟಿ ಮೀಟರ್ ಮಳೆಯಾಗಿದೆ. ಕೆಲವೊಂದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಕೋಲಾರ ಜಿಲ್ಲೆಗಳಿಗೆ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕಲಬುರಗಿ, ರಾಯಚೂರು, ಬಳ್ಳಾರಿ ಭಾಗಕ್ಕೆ ಎಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರಿನಲ್ಲಿ ಇಂದು ಕೂಡ 7 ಸೆಂಟಿ ಮೀಟರ್ ಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಹಿಂಗಾರು ಮಳೆಯಲ್ಲೂ ಈ ರೀತಿಯಾದ ಮಳೆಯಾಗಲಿದೆ. ಹಿಂಗಾರಿನಲ್ಲಿ ತಮಿಳುನಾಡು, ಆಂಧ್ರಪ್ರದೇಶದಲ್ಲಿ ಬದಲಾವಣೆಯಾಗುವುದರಿಂದ ಈ ರೀತಿಯ ಮಳೆ ರಾಜ್ಯದಲ್ಲಿ ಆಗಲಿದೆ. ಬಂಗಾಳದಲ್ಲಿ ವಾಯುಭಾರ ಹೆಚ್ಚಾದಾಗ ಈ ರೀತಿ ಮಳೆ ಸುರಿಯುತ್ತಲೇ ಇದೆ. ರಭಸ ತಗ್ಗುವ ತನಕ ಮಳೆ ಕಡಿಮೆಯಾಗಲ್ಲ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್