ಶಿವಮೊಗ್ಗ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೀತಾ ಶಿವರಾಜ್ ಕುಮಾರ್ ಅವರಿಗೆ ಈಗಾಗಲೇ ಟಿಕೆಟ್ ಘೋಷಣೆಯಾಗಿದೆ. ಪತ್ನಿಯ ಪರವಾಗಿ ಈಗಾಗಲೇ ಶಿವಣ್ಣ ಪ್ರಚಾರ ಕೂಡ ಶುರು ಮಾಡಿದ್ದಾರೆ. ಕಳೆದ ಬಾರಿಯೂ ಗೀತಾ ಶಿವರಾಜ್ ಕುಮಾರ್ ಅವರಿಗೆ ಶಿವಮೊಗ್ಗ ಕ್ಷೇತ್ರದಿಂದಾನೇ ಟಿಕೆಟ್ ನೀಡಲಾಗಿತ್ತು. ಅಂದು ಯಡಿಯೂರಪ್ಪ ಅವರ ವಿರುದ್ಧ ಸ್ಪರ್ಧೆ ಮಾಡಿ, ದೊಡ್ಡ ಅಂತರದಿಂದ ಸೋಲು ಕಂಡಿದ್ದರು. ಇದೀಗ ಮತ್ತೆ ಶಿವಮೊಗ್ಗದಲ್ಲಿಯೇ ಟಿಕೆಟ್ ಸಿಕ್ಕಿದ್ದು, ಈ ಬಾರಿ ಯಡಿಯೂರಪ್ಪ ಅವರ ಪುತ್ರನ ವಿರುದ್ಧ ಸ್ಪರ್ಧೆ ಮಾಡುತ್ತಿದ್ದಾರೆ.
ಚುನಾವಣೆಯ ದಿನಾಂಕ ಇನ್ನು ಘೋಷಣೆಯಾಗಿಲ್ಲ. ಅದಕ್ಕೂ ಮುನ್ನವೇ ಶಿವಮೊಗ್ಗದ ಜನತೆ ಗೀತಾ ಶಿವರಾಜ್ ಕುಮಾರ್ ಬಳಿ ಒಂದಷ್ಟು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಈ ಪ್ರಶ್ನೆಗಳಿರುವ ಪೋಸ್ಟರ್ ಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಒಂದಷ್ಟು ಪ್ರಶ್ನೆಗಳನ್ನು ಕೇಳಿ, ಉತ್ತರಿಸಿ ಎಂದು ಹ್ಯಾಶ್ ಟ್ಯಾಗ್ ಬಳಸುತ್ತಿದ್ದಾರೆ. ಆ ನಾಲ್ಕು ಪ್ರಶ್ನೆಗಳು ಈ ಕೆಳಕಂಡಂತೆ ಇವೆ.
* ಕೊನೆಯ ಚುನಾವಣೆಯಲ್ಲಿ ಸೋತು ಬೆಂಗಳೂರಿಗೆ ತೆರಳಿದ ಮೇಲೆ ಮತ್ತೆ ಶಿವಮೊಗ್ಗಕ್ಕೆ ಎಷ್ಟು ಬಾರಿ ಬಂದಿದ್ದೀರಿ..?
* ಶಿವಮೊಗ್ಗಕ್ಕೆ ಗೀತಾ ಶಿವರಾಜ್ ಕುಮಾರ್ ಅವರ ಕೊಡುಗೆ ಏನು..?
* ಶಿವಮೊಗ್ಗದ ಯಾವ ಹಳ್ಳಿಗಳುಗೆ ಭೇಟು ನೀಡಿದ್ದಾರೆ..?
* ಶಿವಮೊಗ್ಗದ ಜನರ ಕಷ್ಟವನ್ನು ಎಂದಾದರೂ ಕೇಳಿದ್ದೀರಾ..? ಎಂಬ ಪ್ರಶ್ನೆಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ. ಇದು ಟ್ರೋಲ್ ಗೂ ಕಾರಣವಾಗಿದೆ. ಸೋಷಿಯಲ್ ಮೀಡಿಯಾದಲ್ಲೆಲ್ಲಾ ಈ ವಿಚಾರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಸಚಿವ ಮಧು ಬಂಗಾರಪ್ಪ ಅವರು ಗರಂ ಆಗಿದ್ದಾರೆ. ಟ್ರೋಲಿಗರಿಗೆಲ್ಲಾ ಎಚ್ಚರಿಕೆಯ ಸಂದೇಶವನ್ನು ರವಾನೆ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















