Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಯಡಿಯೂರಪ್ಪನಿಗೆ ಮೋಸ ಮಾಡಿದ್ದು ಯಾರು..? ಇದೇ ಕುಮಾರಸ್ವಾಮಿ : ಸಿದ್ದರಾಮಯ್ಯ ಆಕ್ರೋಶ..!

---Advertisement---

ರಾಯಚೂರು: ಪ್ರಜಾಧ್ವನಿ ಯಾತ್ರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಇಂದು ರಾಯಚೂರಿನಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸುತ್ತಿದ್ದು, ಈ ವೇಳೆ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ಅವರಿಗೆ ಮೋಸ ಮಾಡಿದ್ದು ಯಾರು..? ಇದೇ ಕುಮಾರಸ್ವಾಮಿ ಅಲ್ವಾ ಎಂದಿದ್ದಾರೆ.

ರಾಜ್ಯದಲ್ಲಿ ಮನುವಾದಿಗಳ ಸರ್ಕಾರ ಬರುವುದಕ್ಕೆ ಕುಮಾರಸ್ವಾಮಿಯೇ ಕಾರಣ. ನೀನು ಬಿಜೆಪಿ ಜೊತೆ ಸರ್ಕಾರ ಮಾಡಿ, ಈಗ ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಅಂತಿಯಲ್ಲಪ್ಲಾ ನಾಚಿಕೆಯಾಗಲ್ವಾ..? 2006ರಲ್ಲಿ ಕುಮಾರಸ್ವಾಮಿ ಬಿಜೆಪಿ ಜೊತೆ ಸರ್ಕಾರ ಮಾಡದೆ ಇದ್ದಿದ್ದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಲೇ ಇರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ಸಿದ್ದರಾಮಯ್ಯ ಹೇಳಿಕೆಗೆ ಕುಮಾರಸ್ವಾಮಿ ಕೂಡ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಹೇಳಿಕೆಯಲ್ಲಿ ಯಾವುದೇ ಕುತೂಹಲ ಹಾಗೂ ಅಚ್ಚರಿಯಿಲ್ಲ. ಈ ವಿಷಯ ಎರಡು ಮೂರು ವರ್ಷದ ಹಿಂದೆಯೇ ತೀರ್ಮಾನವಾಗಿದೆ. ಅವರು ಮೊದಲೇ ಚರ್ಚೆ ಮಾಡಿ ತೀರ್ಮಾನಿಸಲಾಗಿದೆ. ಸಿದ್ದರಾಮಯ್ಯ ಈಗ ಸತ್ಯ ಹೇಳುತ್ತಿದ್ದಾರೆ. ನಾನು ಈ ಬಗ್ಗೆ ಅರಸೀಕೆರೆಯಲ್ಲಿಯೇ ಮಾತನಾಡುತ್ತೇನೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...