ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯ ಕಣ ಬಿಸಿಯಾಗಿ ಹಲವು ತಿಂಗಳುಗಳೇ ಕಳೆದು ಹೋಗಿದೆ. ಅದರಲ್ಲೂ ಕಾಂಗ್ರೆಸ್ ಸೋಲಿಸಲು ಬಿಜೆಪಿ ಮತ್ತು ಜೆಡಿಎಸ್ ಒಂದಾಗಿದೆ. ಇದರ ನಡುವೆ ಸ್ವತಂತ್ರವಾಗಿ ಸ್ಪರ್ಧಿಸಿ, ಗೆದ್ದಿದ್ದ ಸುಮಲತಾ ಅಧಿಕೃತವಾಗಿ ಬಿಜೆಪಿಗೆ ಬೇರೆ ಸೇರಿದ್ದಾರೆ. ಮಂಡ್ಯದಿಂದಾನೇ ಸ್ಪರ್ಧೆ ಎಂದು ಹೇಳುತ್ತಿರುವ ಸುಮಲತಾಗೆ ಈ ಬಾರಿ ಬಿಜೆಪಿಯ ಟಿಕೆಟ್ ಕೈ ತಪ್ಪುವ ಎಲ್ಲಾ ಸಾಧ್ಯತೆಗಳು ಗೋಚರವಾಗುತ್ತಿವೆ. ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರೇ ಮಂಡ್ಯದ ಲೋಕಸಮರದಲ್ಲಿ ಯುದ್ದಕ್ಕೆ ನಿಲ್ಲಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಬಿಜೆಪಿಯಿಂದ ಟಿಕೆಟ್ ಕೈತಪ್ಪಿದರೆ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡೋಣಾ ಎಂದು ಸುಮಲತಾ ಯೋಚಿಸಿದ್ದಾರೆ ಎಂಬ ಮಾತು ಕೂಡ ಕೇಳಿ ಬರುತ್ತಿದೆ. ಆದರೆ ಇದರ ನಡುವೆ ರಮ್ಯಾ ಅವರ ಹೆಸರು ಕೂಡ ಪ್ರಸ್ತಾಪವಾಗಿದೆ. ಕ್ರೇಜ್ ಹಾಗೇ ಇರುವ ಕಾರಣ ಈ ಬಾರಿ ಮಂಡ್ಯ ಕ್ಷೇತ್ರದಲ್ಲಿ ರಮ್ಯಾ ನಿಲ್ಲಲಿದ್ದಾರೆ ಎನ್ನಲಾಗಿತ್ತು. ಈ ಎಲ್ಲಾ ಊಹಾಪೋಹಗಳ ನಡುವೆ ಕಾಂಗ್ರೆಸ್ ನಾಯಕರು ಈಗಾಗಲೇ ಮಂಡ್ಯ ಅಭ್ಯರ್ಥಿಯ ಹೆಸರನ್ನು ಹೈಕಮಾಂಡ್ ಗೆ ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ, ಮಂಡ್ಯದಲ್ಲಿ ಸ್ಟಾರ್ ಚಂದ್ರು ಎಂದೇ ಫೇಮಸ್ ಆಗಿರುವ ಗುತ್ತಿಗೆದಾರ ವೆಂಕಟರಮಣೇಗೌಡ ಅವರ ಹೆಸರನ್ನು ಫೈನಲ್ ಮಾಡಿದೆಯಂತೆ. ಇವರು ಮಂಡ್ಯ ಭಾಗದಲ್ಲಿ ಸ್ಟಾರ್ ಚಂದ್ರು ಎಂದೇ ಖ್ಯಾತಿ ಪಡೆದಿದ್ದಾರೆ. ಇವರ ಮೂಲ ಹೆಸರು ವೆಂಕಟರಮಣೇಗೌಡ. ಎಲ್ಲಾ ಪಕ್ಷದ ನಾಯಕರಿಗೂ ಇವರು ಚಿರಪರಿಚಿತರಾಗಿದ್ದಾರೆ. ಈಗಾಗಲೇ ಸಚಿವ ಚೆಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಶಾಸಕರು ಸ್ಟಾರ್ ಚಂದ್ರುಗೆ ಟಿಕೆಟ್ ನೀಡಲು ಗ್ರೀನ್ ಸಿಗ್ನಲ್ ಕೂಡ ನೀಡಿದ್ದಾರಂತೆ.
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…