ರಷ್ಯಾ ಮತ್ತು ಉಕ್ರೇನ್ ಯುದ್ಧದಲ್ಲಿ ಕನ್ನಡಿಗ ನವೀನ್ ಸಾವನ್ನಪ್ಪಿದ್ದಾರೆ. ವಿದ್ಯಾಭ್ಯಾಸಕ್ಕೆಂದು ಉಕ್ರೇನ್ ಗೆ ಹೋಗಿದ್ದ ನವೀನ್ ಇಂದು ರಷ್ಯಾದ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. ಅಲ್ಲಿರುವ ಕನ್ನಡಿಗರನ್ನ ಕರೆತರಲು ಭಾರತ ಸರ್ಕಾರ ಸಾಕಷ್ಟು ಪ್ರಯತ್ನ ನಡೆಸಿತ್ತಿದೆ. ಈ ಮಧ್ಯೆಯೂ ಇಂಥ ಘಟನೆ ನಡೆದಿದೆ. ಈ ಸಂಬಂಧ ಡಿ ಕೆ ಶಿವಕುಮಾರ್ ಅವರು ಕೇಂದ್ರ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ.
ವಿದ್ಯಾರ್ಥಿಗಳನ್ನ ರಕ್ಷಿಸಲು ಕೇಂದ್ರ ಸರ್ಕಾರ ನಾಲ್ಕು ಕೇಂದ್ರ ಸಚಿವರನ್ನ ನೇಮಿಸಲಾಗಿದೆ. ಆದ್ರೆ ಆ ನಾಲ್ಕು ಸಚಿವರು ಏನು ಮಾಡುತ್ತಿದ್ದಾರೆ. ವಿದ್ಯಾರ್ಥಿಗಳನ್ನ ರಕ್ಷಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡು ವಿಫಲವಾಗಿದೆ. ಮೋದಿ ಎಲ್ಲರನ್ನು ಕರೆತರುತ್ತೇನೆ ಎಂದು ಹೇಳಿದ್ದರು. ಈಗ ಏನಾಗಿದೆ..? ಆ ವಿದ್ಯಾರ್ಥಿ ಸಾವಿಗೆ ಹೊಣೆ ಯಾರು ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆಗೆ ಆಗ್ರಹಿಸಿ ಎರಡನೇ ಬಾರಿಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಎರಡನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆಯಲ್ಲಿ ವಿದ್ಯಾರ್ಥಿ ನವೀನ್ ಬಗ್ಗೆ ಮಾತನಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.