Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭಾಗ್ಯಲಕ್ಷ್ಮೀ ಬಾಂಡ್ ಮೆಚ್ಯುರಿಟಿ ಹಣ ಪಡೆಯಲು ಯಾರನ್ನು ಸಂಪರ್ಕಿಸಬೇಕು ? ಇಲ್ಲಿದೆ ಮಾಹಿತಿ…!

---Advertisement---

ಚಿತ್ರದುರ್ಗ. ಮಾ.07: ಭಾಗ್ಯಲಕ್ಷ್ಮೀ (ಸುಕನ್ಯ ಸಮೃದ್ಧಿ ಯೋಜನೆ) ಯೋಜನೆಯು 2006-07ನೇ ಸಾಲಿನಿಂದ ಜಾರಿಯಾಗಿದ್ದು, ಪ್ರಸ್ತುತ ನೋಂದಣಿ ಜಾರಿಯಲ್ಲಿದ್ದು, ಈಗಾಗಲೇ ನೋಂದಣಿಯಾಗಿ ಸೌಲಭ್ಯ ಪಡೆದಿರುವ ಫಲಾನುಭವಿಗಳಿಗೆ 2024-25ನೇ ಸಾಲಿನಿಂದ ಪರಿಪಕ್ವ ಮೊತ್ತ ಒದಗಿಸಬೇಕಾಗಿರುತ್ತದೆ.

ಪರಿಪಕ್ವ ಮೊತ್ತ ಒದಗಿಸಲು ಹಾಗೂ ಹೊಸದಾಗಿ ಭಾಗ್ಯಲಕ್ಷ್ಮೀ ಬಾಂಡ್ (ಸುಕನ್ಯ ಸಮೃದ್ಧಿ ಯೋಜನೆ) ಪಡೆಯುವ ಕ್ರಮಗಳ ಬಗ್ಗೆ ತಾಲ್ಲೂಕು ಮಟ್ಟದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹಾಗೂ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರನ್ನು ಸಂಪರ್ಕಿಸಬಹುದಾಗಿದೆ.
ಭಾಗ್ಯಲಕ್ಷ್ಮೀ (ಸುಕನ್ಯ ಸಮೃದ್ಧಿ ಯೋಜನೆ) ಯೋಜನೆಯಡಿ ನೋಂದಣಿಯಾಗಿರುವ ಎಲ್ಲಾ ಫಲಾನುಭವಿಗಳಿಗೆ, ಸಾರ್ವಜನಿಕರ ಗಮನಕ್ಕೆ ತರಬಯಸುವುದೆನೆಂದರೆ ಈ ಯೋಜನೆಯು ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿದ್ದು, ನೋಂದಣಿ ಹಾಗೂ ಪರಿಪಕ್ವ ಮೊತ್ತ ಪಾವತಿಯು ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಯಾವುದೇ ತಾಲ್ಲೂಕು ಕಛೇರಿಗಳಲ್ಲಿ ಮದ್ಯವರ್ತಿಗಳಾಗಲೀ ಅಥವಾ ಸಿಬ್ಬಂದಿಗಳಾಗಲೀ ಹಣ ಕೇಳಿದಲ್ಲಿ ನೇರವಾಗಿ ಸಂಬಂಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಜಿಲ್ಲಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ ಇವರನ್ನು ಸಂಪರ್ಕಿಸಬಹುದಾಗಿದೆ.

 

ಹೆಚ್ಚಿನ ಮಾಹಿತಿಗಾಗಿ
ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9448566058,
ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9448873683,
ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9945888425,
ಹಿರಿಯೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-7892661086,
ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9481182921,
ಹೊಸದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು -8867404421,
ಮೊಳಕಾಲ್ಕೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು -7353002417, ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು- 9480500575 ಅವರನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment