ತಂದೆಯ ಮೈ ಬಣ್ಣದ ಬಗ್ಗೆ ಮಾತನಾಡಿದ ಆರಗ ಜ್ಞಾನೇಂದ್ರಗೆ ಏನಂದ್ರು ಪ್ರಿಯಾಂಕ ಖರ್ಗೆ

suddionenews
1 Min Read

ಆರಗ ಜ್ಞಾನೇಂದ್ರ ಅವರು ಮಲೆನಾಡಿನ ಬಗ್ಗೆ ಹೇಳುವಾಗ ಮಲ್ಲಿಕಾರ್ಜುನ ಖರ್ಗೆ ಬಣ್ಣದ ಬಗ್ಗೆ ಮಾತನಾಡಿದ್ದರು. ಬಳಿಕ ಅದಕ್ಕೆ ಸ್ಪಷ್ಟನೆ ಕೂಡ ನೀಡಿದ್ದರು. ಆದರೆ ಕಾಂಗ್ರೆಸ್ ನಿಂದ ಇದಕ್ಕೆ ವಿರೋಧ ವ್ಯಕ್ತವಾಗಿತ್ತು. ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಕೂಡ ಬೇಸರ ಹೊರ ಹಾಕಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಆರಗ ಜ್ಞಾನೇಂದ್ರ ಅವರೇ, ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು.

ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ. ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಿನಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು, ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ.

ಆರಗ ಜ್ಞಾನೇಂದ್ರ ಅವರು ಒಂದೇ ಒಂದು ದಿನ ಮಣ್ಣು ಹೊತ್ತರೆ ಅವರ ಮೈಬಣ್ಣವೂ ಕಪ್ಪಗಾಗುತ್ತದೆ. ಮನುಸ್ಮೃತಿಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ. @BJP4Karnatakaಯ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರಕಲು ಮಾಡುತ್ತದೆ, ಏಕೆಂದರೆ ಇದು ಮನುಸ್ಮೃತಿಯ ಕಾಲವಲ್ಲ, ಬಾಬಾ ಸಾಹೇಬರ ಸಂವಿಧಾನದ ಕಾಲ ಎಂದು ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *