ಕೋಲಾರ: ರಾಜ್ಯ ವಿಧಾನಸಭಾ ಚುನಾವಣೆ ದಿನ ಹತ್ತಿರವಾಗುತ್ತಿದೆ. ಮೂರು ಪಕ್ಷಗಳು ಅಧಿಕಾರಕ್ಕೇರಲು ಹಪಹಪಿಸುತ್ತಿವೆ. ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಯಾರೂ ಎಂಬ ಚರ್ಚೆ ಹಿಂದಿನಿಂದಲೂ ಶುರುವಾಗಿದೆ. ಇಂದು ಆ ವಿಚಾರದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದಾರೆ.
ಕೋಲಾರದಲ್ಲಿ ಇಂದು ಕಾಂಗ್ರೆಸ್ ವತಿಯಿಂದ ಜೈ ಭಾರತ್ ಸಮಾವೇಶ ನಡೆದಿದೆ. ಈ ಕಾರ್ಯಕ್ರಮ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿದೆ. ಈ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನಿಮ್ಮಲ್ಲಿ ಯಾರೆ ಮುಖ್ಯಮಂತ್ರಿ ಆಗಿ. ಅದು ನನಗೆ ಬೇಕಾಗಿಲ್ಲ. ಪಕ್ಷ ಅಧಿಕಾರಕ್ಕೆ ಬರಬೇಕು ಅಷ್ಟೇ. ನೀವೂ ಸಿಎಂ ಸ್ಥಾನದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದಿದ್ದಾರೆ. ಸಿಎಂ ಸ್ಥಾನದ ಬಗ್ಗೆ ತಲೆ ಕೆಡಿಸಿಕೊಳ್ಳುವುದಕ್ಕಿಂತ ಜನರ ಬಗ್ಗೆ ತಲೆ ಕೆಡಿಸಿಕೊಳ್ಳಿ. ಚುನಾವಣೆ ಮುಗಿದ ಬಳಿಕ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದಿದ್ದಾರೆ.
ಇನ್ನು ಕಾಂಗ್ರೆಸ್ ನಲ್ಲಿ ಚುನಾವಣೆಗೂ ಮುನ್ನವೇ ಸಿದ್ದರಾಮಯ್ಯ ಹಾಗೂ ಡಿಕೆಶಿ ಬೆಂಬಲಿಗರ ನಡುವೆ ಸಿಎಂ ವಿಚಾರ ಸದ್ದು ಮಾಡ್ತಾ ಇತ್ತು. ಸಿದ್ದರಾಮಯ್ಯ ಬೆಂಬಲಿಗರು ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಕೂಗಿದರೆ, ಡಿಕೆ ಶಿವಕುಮಾರ್ ಬೆಂಬಲಿಗರು ಡಿಕೆಶಿ ಅವರಿಗೆ ಬೆಂಬಲ ಸೂಚಿಸಿದ್ದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…