ಬೆಂಗಳೂರು: ಅನಾರೋಗ್ಯದ ನಿಮಿತ್ತ ವಿದೇಶದಲ್ಲಿ ಮಂಗಳವಾರ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಫೋನ್ ಕರೆಮಾಡಿ ಮಾತನಾಡಿದ್ದಾರೆ.
ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ವಿಷಯ ಹಂಚಿಕೊಂಡಿದ್ದಾರೆ.
ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ.

ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜಕುಮಾರ್ ಅವರ ಆಗಮನವನ್ನು
ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ.
ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜಕುಮಾರ್ ಅವರ ಜೊತೆಗಿದ್ದು ಅವರನ್ನು ಕಾಪಾಡಲಿದೆ ಎಂದು ಹೇಳಿದ್ದಾರೆ
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









