ಬೆಂಗಳೂರು: ಇಂದು ಶಾಸಕ ಮುನಿರತ್ನ ವಿಧಾನಸೌಧದ ಮುಂದೆ ಏಕಾಂಕಿಯಾಗಿ ಪ್ರತಿಭಟನೆ ನಡೆಸಿದ್ದರು. ಗಾಂಧಿ ಪ್ರತಿಮೆ ಮುಂದೆ ಕೂತು ಸಿಂಗಲ್ ಆಗಿ ಪ್ರೊಟೆಸ್ಟ್ ಮಾಡಿದ್ದರು. ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಮುನಿರತ್ನ ಅವರು ಆಕ್ರೋಶ ಹೊರ ಹಾಕಿದ್ದರು. ರಾಜರಾಜೇಶ್ವರಿ ನಗರಕ್ಕೆ ಅನುದಾನ ಕಡಿತಗೊಳಿಸಿದ ಹಿನ್ನಲೆ, ಸತ್ಯಾಗ್ರಹ ಮಾಡಲು ಯೋಜನೆ ರೂಪಿಸಿದ್ದರು.
ಗಾಂಧಿ ಪ್ರತಿಮೆ ಮುಂದೆ, ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯ ತನಕ ಪ್ರತಿಭಟನೆ ನಡೆಸಲು ಪ್ಲ್ಯಾನ್ ಮಾಡಿದ್ದರು. ಈ ವೇಳೆ ಮುನಿರತ್ನ ಅವರನ್ನು ಮಾಜಿ ಸಿಎಂ ಯಡಿಯೂರಪ್ಪ ಅವರೇ ಸಮಾಧಾನ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಬಳಿ ಈ ಸಂಬಂಧ ಮಾತನಾಡುವುದಾಗಿ ಹೇಳಿದ್ದಾರೆ. ಯಡಿಯೂರಪ್ಪ ಅವರು ಭರವಸೆ ನೀಡಿದ ಬಳಿಕ ಮುನಿರತ್ನ ಅವರು ತಮ್ಮ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ.
ಬಳಿಕ ಮಾತನಾಡಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು, ಬಿಜೆಪಿ ಸರ್ಕಾರ ನೀಡಿದ್ದ ಅನುದಾನವನ್ನು ರದ್ದು ಮಾಡಿ, ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಈ ರೀತಿ ಮಾಡುವುದು ಸರಿಯಲ್ಲ. ಈ ರೀತಿ ಮಾಡಬೇಡಿ ಎಂದು ಸರ್ಕಾರಕ್ಕೆ ತಿಳಿಸುತ್ತೇನೆ. ಒಬ್ಬರೇ ಧರಣಿ ಮಾಡುವುದು ಬೇಡ. ಮುನಿರತ್ನ ಜೊತೆಗೆ ನಾವೆಲ್ಲಾ ಇದ್ದೇವೆ. ಮೊದಲು ಧರಣಿ ಕೈಬಿಡಿ ಎಂದು ಯಡಿಯೂರಪ್ಪ ಅವರು ಹೇಳಿದರು.
ಯಡಿಯೂರಪ್ಪ ಅವರ ಮಾತಿಗೆ ಒಪ್ಪಿಗೆ ನೀಡಿ, ಧರಣಿ ಕೈಬಿಟ್ಟ ಮುನಿರತ್ನ ಅವರು ಮಾತನಾಡಿ, ಮಧ್ಯಾಹ್ನದ ತನಕ ನಾನು ಸತ್ಯಾಗ್ರಹ ಮಾಡಬೇಕೆಂದುಕೊಂಡಿದ್ದೆ. ಆದರೆ ಯಡಿಯೂರಪ್ಪ ಅವರು ನನ್ನ ಜೊತೆ ನಿಲ್ಲುವ ಭರವಸೆ ನೀಡಿದ್ದಾರೆ. ಹೀಗಾಗಿ ಸತ್ಯಾಗ್ರಹ ಕೈಬಿಟ್ಟಿದ್ದೇನೆ. ನಮ್ಮಲ್ಲಿ ಗಾಂಜಾ ಮಾರಾಟ ಜಾಸ್ತಿಯಾಗ್ತಾ ಇದೆ, ಪೊಲೀಸರ ಬಳಿಯೇ ಸೆಲ್ಫಿ ತೆಗೆಸಿಕೊಳ್ಳುತ್ತಾರೆ, ಹೇಳಿದ ಕೆಲಸವಾಗುತ್ತಿಲ್ಲ ಎಂದು ಬೇಸರ ಹೊರ ಹಾಕಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…