ನವದೆಹಲಿ: ಮಹಾತ್ಮ ಗಾಂಧಿ ಹತ್ಯೆ ಕುರಿತ ಸಂಬಂಧ ಸಿನಿಮಾವೊಂದು ರೆಡಿಯಾಗಿದೆ. ಆ ಸಿನಿಮಾ ನಾಳೆ ಒಟಿಟಿಯಲ್ಲಿ ರಿಲೀಸ್ ಆಗಲಿದೆ. ಆದ್ರೆ ಈ ಸಿನಿಮಾವನ್ನ ರಿಲೀಸ್ ಮಾಡಬಾರದು ಎಂದು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ.
ಚಿತ್ರಕ್ಕೆ ತಡೆಯಾಜ್ಞೆ ಕೋರಿ ವಕೀಲ ಅನುಜ್ ಭಂಡಾರಿ ಸೇರಿದಂತೆ ಅನೇಕರು ಅರ್ಜಿ ಸಲ್ಲಿಸಿದ್ದಾರೆ. ಒಟಿಟಿ ವೇದಿಕೆಗಳಲ್ಲಾಗಲೀ ಅಥವಾ ಸಾಮಾಜಿಕ ಮಾಧ್ಯಮದಲ್ಲಾಗಲಿ ಈ ಸಿನಿಮಾ ಕುರಿತು ಯಾವುದೇ ರೀತಿಯ ದೃಶ್ಯಗಳನ್ನು ಪ್ರದರ್ಶಿಸದಂತೆ ತಡೆ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಯುವ ಕಾಂಗ್ರೆಸ್ ಕೂಡ ಈ ಸಿನಿಮಾ ಸಂಬಂಧ ಮನವಿ ಮಾಡಿದೆ. ಪಂಚರಾಜ್ಯಗಳ ಚುನಾವಣೆ ಮುಗಿಯುವ ತನಕ ಯಾವುದೇ ಕಾರಣಕ್ಕೂ ಸಿನಿಮಾ ಪ್ರದರ್ಶನಕ್ಕೆ ಅನುಮತಿ ನೀಡಬಾರದು. ದೇಶದಲ್ಲಿ ಕೋಮುವಾದದ ಅಂಶವಿದೆ. ಈ ದೇಶ ಗಾಂಧಿಯವರದ್ದು. ಗಾಂಧಿಯವರಿಂದಲೇ ಉಳಿಯುತ್ತದೆ. ಗೋಡ್ಸೆಯವರ ಚಿಂತನೆಗೆ ಇಲ್ಲಿ ಅವಕಾಶವಿಲ್ಲ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ ವಿ ಹೇಳಿದ್ದಾರೆ.
ಈ ಸಿನಿಮಾ ರಿಲೀಸ್ ಆಗದಂತೆ ನೋಡಿಕೊಳ್ಳಬೇಕು. ಅದು ರಾಷ್ಟ್ರಪಿತನ ಪ್ರತಿಷ್ಠೆಗೆ ಧಕ್ಕೆಯುಂಟು ಮಾಡುತ್ತದೆ. ಸಾರ್ವಜನಿಕ ಅಶಾಂತಿ ಮತ್ತು ದ್ವೇಷ ಉಂಟು ಮಾಡುತ್ತದೆ. ಹೀಗಾಗಿ ಸಿನಿಮಾ ರಿಲೀಸ್ ಗೆ ತಡೆ ನೀಡಬೇಕೆಂದು ಕಾಂಗ್ರೆಸ್ ಮನವಿ ಮಾಡಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…