ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಎಂಬ ಅಭಿಯಾನ ಶುರು ಮಾಡಿದ್ದಾರೆ. ಟ್ವಿಟ್ಟರ್ ನಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ. ನಮ್ಮ ನಾಡು ಕರ್ನಾಟಕ ಎಂದು ಮರುನಾಮಕರಣಗೊಂಡು 50 ವಸಂತಗಳು ತುಂಬುತ್ತಿರುವ ಹೊತ್ತಿನಲ್ಲಿ ಕರ್ನಾಟಕವು ಸಾಗಿಬಂದ ಹಾದಿಯನ್ನು ಸ್ಮರಿಸಿಕೊಳ್ಳಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದ್ದಾರೆ.
2017ರಲ್ಲಿ ಬರದಿಂದ ತತ್ತರಿಸಿಹೋಗಿದ್ದ ಕರ್ನಾಟಕದ ಜನತೆ ಕೇಂದ್ರದ ನೆರವಿಗಾಗಿ ನಿಮ್ಮತ್ತ ನೋಡುತ್ತಿದ್ದರು. ಆದರೆ ನಿಮ್ಮಿಂದ ನಮಗೆ ಸಿಕ್ಕಿದ್ದು ಬಿಡಿಗಾಸು ಪರಿಹಾರ. ಪ್ರಧಾನಿ ನರೇಂದ್ರ ಮೋದಿ ಅವರೇ, ಕನ್ನಡಿಗರ ಮೇಲೇಕೆ ಈ ಮಲತಾಯಿ ಧೋರಣೆ? ನಿಮ್ಮ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ.
ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ,
ಈ ವರೆಗೆ ಕೇಂದ್ರದಿಂದ ನಯಾಪೈಸೆ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರೇ,
ಜಗತ್ತಿನ ಕಷ್ಟ – ದು:ಖಕ್ಕೆಲ್ಲ ಮಿಡಿಯುವ ನಿಮ್ಮ ‘ವಿಶಾಲ ಹೃದಯ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ? ನಿಮ್ಮ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ಎಂದು ಪ್ರಶ್ನಿಸಿದ್ದಾರೆ.