ಬೆಂಗಳೂರು: ಇಂದು ಕಾಂಗ್ರೆಸ್ ಸರ್ಕಾರ ಸಚಿವ ಸಂಪುಟ ಸಭೆ ನಡೆಸಿದೆ. ಈ ವೇಳೆ ಕಾಂಗ್ರೆಸ್ ಸರ್ಕಾರ ನೀಡಿದ ಯೋಜನೆಗಳ ಜಾರಿ ಬಗ್ಗೆ ಚರ್ಚೆ ನಡೆಸಲಾಗಿದೆ. ಅದರಲ್ಲಿ ಅಕ್ಕಿ ಭಾಗ್ಯ ಯೋಜನೆಯಲ್ಲಿ ಕೊಂಚ ಬದಲಾವಣೆಯಾಗಿದ್ದು, ಅಕ್ಕಿ ಬದಲು ಐದು ಕೆಜಿಗೆ ಹಣ ನೀಡಲು ನಿರ್ಧಾರ ಮಾಡಲಾಗಿದೆ.

ಇನ್ನು ಎಲ್ಲಾ ಮಹಿಳೆಯರು ಕುತೂಹಲದಿಂದ ಕಾಯುತ್ತಿಎಉವ ಗೃಹಲಕ್ಷ್ಮೀ ಯೋಜನೆ ಬಗ್ಗೆಯೂ ಚರ್ಚೆ ನಡೆದಿದೆ. ಈ ಬಗ್ಗೆ ಮಾತನಾಡಿದ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಆಗಸ್ಟ್ ನಲ್ಲಿ ಮಹಿಳೆಯರ ಖಾತೆಗೆ ಹಣ ಹಾಕಿಯೇ ಹಾಕ್ತೀವಿ ಎಂದಿದ್ದಾರೆ.

ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಬಗ್ಗೆ ಚರ್ಚೆಯಾಗಿದೆ. ಜುಲೈ 3ರಂದು ನಾವು ಮತ್ತೆ ಸಂಪೂರ್ಣ ಮಾಹಿತಿ ನೀಡುತ್ತೇವೆ. ಗೃಹಲಕ್ಷ್ಮಿ ಅರ್ಜಿಗೆ ಮುಖ್ಯಮಂತ್ರಿಗಳು ಒಪ್ಪಿಗೆ ಕೊಟ್ಟಿದ್ದಾರೆ. ಗೃಹಜೋತಿ ಯೋಜನೆ ಸ್ಮೂತ್ ಆಗಿ ಹೋಗುತ್ತದೆ. ಅದೊಂದೇ ಕಾರಣಕ್ಕೆ ಗೃಹಲಕ್ಷ್ಮಿ ಸ್ವಲ್ಪ ತಡವಾಗುತ್ತದೆ. ಎಷ್ಟೇ ಅಪ್ಲಿಕೇಶನ್ ಮಾಡಿದರು ಸರ್ವರ್ ಒಂದೇ ಅಲ್ವಾ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ.


