Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯುದ್ಧದ ಸಮಯದಲ್ಲಿ  ಏರಬೇಕಾದ ಚಿನ್ನದ ಬೆಲೆ ಏಕೆ ಕುಸಿಯುತ್ತಿದೆ ? ಇಲ್ಲಿದೆ ತಜ್ಞರ ಅಭಿಪ್ರಾಯ

---Advertisement---

ಯುದ್ಧ ಆರಂಭವಾಗಿ ಇವತ್ತಿಗೆ ಸುಮಾರು 12 ದಿನಗಳು ಕಳೆದಿವೆ. ಜಾಗತಿಕ ಬಿಕ್ಕಟ್ಟುಗಳು ಎದುರಾದಾಗ ಚಿನ್ನ ಬೆಳ್ಳಿ ದರ ಗಗನಕ್ಕೆ ಏರುತ್ತವೆ. ಆದರೆ, ಈ ಬಾರಿಯ ಇರಾನ್ ಯುದ್ಧದ ಸಮಯದಲ್ಲಿ ಮಾರುಕಟ್ಟೆಯಲ್ಲಿ ಆಶ್ಚರ್ಯಕರ ಬದಲಾವಣೆ ಸಂಭವಿಸಿದೆ.

ಸಾಮಾನ್ಯವಾಗಿ ಜಾಗತಿಕ ರಾಜಕೀಯ ಉದ್ವಿಗ್ನತೆ ಅಥವಾ ದೊಡ್ಡ ಮಟ್ಟದ ಯುದ್ಧಗಳು ಸಂಭವಿಸಿದಾಗ, ಹೂಡಿಕೆದಾರರು ಷೇರು ಮಾರುಕಟ್ಟೆಯ ಅಪಾಯದಿಂದ ಬಚಾವಾಗಲು ‘ಸುರಕ್ಷಿತ ತಾಣ’ (Safe Haven) ಎಂದು ಕರೆಯಲ್ಪಡುವ ಚಿನ್ನದ ಮೇಲೆ ಹೂಡಿಕೆ ಮಾಡುತ್ತಾರೆ. ಇದರಿಂದ ಬೇಡಿಕೆ ಹೆಚ್ಚಿ ಬೆಲೆ ಏರಿಕೆಯಾಗುತ್ತದೆ. ಆದರೆ ಈ ಬಾರಿ ಯುದ್ಧದ ತೀವ್ರತೆ ಹೆಚ್ಚಿದ್ದರೂ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರುವ ಬದಲು ಇಳಿಯುತ್ತಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಮಾರುಕಟ್ಟೆ ತಜ್ಞರ ಪ್ರಕಾರ, ಯುದ್ಧ ನಡೆಯುತ್ತಿದ್ದರೂ ಚಿನ್ನದ ಬೆಲೆ ಕುಸಿಯಲು ಪ್ರಮುಖ ಕಾರಣವೆಂದರೆ ‘ಯುಎಸ್ ಡಾಲರ್ ಸೂಚ್ಯಂಕ’ದ (US Dollar Index) ಬಲವರ್ಧನೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ಮೌಲ್ಯ ಹೆಚ್ಚಾದಾಗ, ಇತರ ಕರೆನ್ಸಿಗಳನ್ನು ಬಳಸುವವರಿಗೆ ಚಿನ್ನದ ಖರೀದಿ ದುಬಾರಿಯಾಗುತ್ತದೆ. ಈ ಕಾರಣದಿಂದಾಗಿ ಜಾಗತಿಕ ಮಟ್ಟದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೇಡಿಕೆ ತಾತ್ಕಾಲಿಕವಾಗಿ ಕಡಿಮೆಯಾಗಿದ್ದು, ಬೆಲೆಯಲ್ಲಿ ಇಳಿಕೆ ಕಂಡುಬರುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now