ಬೆಂಗಳೂರು: ಇಂದಿನಿಂದ ಕಾಂಗ್ರೆಸ್ ನಾಯಕರು 10 ದಿನಗಳ ಕಾಲ ಮೇಕೆದಾಟು ಪಾದಯಾತ್ರೆ ನಡೆಸಲಿದ್ದಾರೆ. ಕನಕಪುರದ ಸಂಗಮ ಕ್ಷೇತ್ರದಿಂದ ಪಾದಯಾತ್ರೆಗೆ ಚಾಲನೆ ಸಿಕ್ಕಿದೆ. ಈ ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು.
ಆದ್ರೆ ಈ ಮೇಕೆದಾಟು ಪಾದಯಾತ್ರೆಗೆ ಕರ್ನಾಟಕ ಯೂಥ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಭಾಗಿಯಾಗಿರಲಿಲ್ಲ. ಈ ಸಂಬಂಧ ಟ್ವೀಟ್ ಮಾಡಿ ಪಾದಯಾತ್ರೆಯಲ್ಲಿ ಭಾಗವಹಿಸದ ಬಗ್ಗೆ ಮಾಹಿತಿ ನೀಡಿದ್ದಾರೆ.
ಕಳೆದ 2 ದಿನದಿಂದ ನನಗೆ ಜ್ವರ ಕಾಣಿಸಿಕೊಂಡಿದ್ದು ಇಂದು ಬೆಳಿಗ್ಗೆ ಕೋವಿಡ್ ಪರೀಕ್ಷೆಗೊಳಪಟ್ಟಾಗಾಗ ಯಾವುದೆ ಸೋಂಕು ಕಂಡುಬಂದಿಲ್ಲ. ವೈದ್ಯರು ಎರಡು ದಿನ ವಿಶ್ರಾಂತಿ ಹೇಳಿರುವುದರಿಂದ, ವಿಶ್ರಾಂತಿಯ ನಂತರ ಆದಷ್ಟು ಬೇಗ ಮೇಕದಾಟು ಯೋಜನೆಯಲ್ಲಿ ಭಾಗವಹಿಸಲಿದ್ದೇನೆ. ಇಂದು ಪಾದಯಾತ್ರೆಯಲ್ಲಿ ಭಾಗಿಯಾಗಲು ಸಾಧ್ಯವಾಗದಿದ್ದಕ್ಕೆ ಬೇಸರವಿದೆ ಎಂದು ಟ್ವೀಟ್ ಮಾಡಿದ್ದಾರೆ.