ಬೆಂಗಳೂರು: ಶೋಭಾ ಕರಂದ್ಲಾಜೆ ಪ್ರಧಾನಿ ಮೋದಿ ಸರ್ಕಾರದಲ್ಲಿ ಒಳ್ಳೆ ಹುದ್ದೆಯಲ್ಲಿ ನಿರತರಾಗಿದ್ದಾರೆ. ರಾಜ್ಯ ಬಿಟ್ಟು ಕೇಂದ್ರಕ್ಕೆ ಹೋದ ಮೇಲೆ ಮತ್ತೆ ರಾಜ್ಯ ರಾಜಕಾರಣಕ್ಕೆ ಬರುತ್ತಾರಾ ಇಲ್ಲವಾ ಎಂಬೆಲ್ಲಾ ಪ್ರಶ್ನೆಗಳು ಎದ್ದಿದ್ದವು. ಇದೀಗ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈ ವಿಚಾರಕ್ಕೆ ಅವರೇ ಸ್ಪಷ್ಟನೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ರಾಜ್ಯ ರಾಜಕಾರಣಕ್ಕೆ ಮತ್ತೆ ಹಿಂತಿರುಗಿ ಬರುವುದಿಲ್ಲ ಎಂದಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿಯವರು ನನಗೆ ಕೃಷಿ ಇಲಾಖೆಯ ಜವಬ್ದಾರಿ ನೀಡಿದ್ದಾರೆ. ಅಷ್ಟೇ ಅಲ್ಲ ಅನೇಕ ರಾಜ್ಯಗಳ ಚುನಾವಣಾ ಉಸ್ತುವಾರಿಯ ಜವಾಬ್ದಾರಿಯನ್ನು ನೀಡಿದ್ದಾರೆ. ಇದರಲ್ಲಿ ನಾನು ತುಂಬಾ ಖುಷಿಯಾಗಿದ್ದೇನೆ. ಮತ್ತೆ ರಾಜ್ಯ ರಾಜಕಾರಣಕ್ಕೆ ಬರುವ ಚರ್ಚೆಯೇ ಆಗಿಲ್ಲ ಎಂದಿದ್ದಾರೆ.
ಪಕ್ಷ ನನಗೆ ಜವಬ್ದಾರಿ ಕೊಟ್ಟಿದೆ. ನಾನು ಕೂಡ ಅದನ್ನು ನಿಭಾಯಿಸಿಕೊಂಡು ಹೋಗುತ್ತಿದ್ದೇನೆ. ಇಂಥ ಚರ್ಚೆಯೆಲ್ಲಾ ಆಧಾರಕ್ಕೆ ದೂರವಾದದ್ದೆ ಆಗಿದೆ. ಈ ರೀತಿಯಾದ ಯಾವ ಚರ್ಚೆಯು ಆಗಿಲ್ಲ. ನಾನು ವಾಪಾಸು ರಾಜ್ಯ ರಾಜಕಾರಣಕ್ಕೆ ಎಂಟ್ರಿಯಾಗಲ್ಲ ಎಂದು ಖಡಕ್ಕಾಗಿಯೇ ಉತ್ತರಿಸಿದ್ದಾರೆ ಶೋಭಾ ಕರಂದ್ಲಾಜೆ.