Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದು ಯಾಕೆ ರಿಸೈನ್ ಮಾಡಬೇಕು.. ಕುಮಾರಸ್ವಾಮಿ ಮಾಡ್ತಾರಾ..? ಜಿಟಿಡಿ ಮಾತಿಗೆ ಹೆಚ್ಡಿಕೆ ಸ್ಪಷ್ಟನೆ..!

---Advertisement---

ಬೆಂಗಳೂರು: ಮೂಡಾ ಹಗರಣದಲ್ಲಿ ವಿಪಕ್ಷ ನಾಯಕರು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿವೆ. ಇಂದು ದಸರಾ ಹಬ್ಬಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ದಸರಾ ಉದ್ಘಾಟನೆಯಲ್ಲಿ ಜಿ.ಟಿ.ದೇವೇಗೌಡ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಈ ವೇಳೆ ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯ ಅವರ epidemic ರವಾಗಿ ಮಾತನಾಡಿದ್ದಾರೆ.

ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಕೊಡುವುದಾದರೆ ಎಫ್ಐಆರ್ ಆಗಿರುವ ಎಲ್ಲಾ ನಾಯಕರು ರಾಜೀನಾಮೆ ಕೊಡಲಿ. ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿ ಅವರು ರಾಜೀನಾಮೆ ಕೊಡುತ್ತಾರಾ..? ಸಿದ್ದರಾಮಯ್ಯ ಅವರು ಯಾವತ್ತೂ ಕುಟಿಂಬ ನೋಡಿದವರಲ್ಲ. ಈಗ ಎಲ್ಲರೂ ಗಾಜಿನ ಮನೆಯಲ್ಲಿ ಕುಳಿತಿದ್ದಾರೆ‌. ಎಫ್ಐಆರ್ ಆದವರು ರಾಜೀನಾಮೆ ಕೊಡಬೇಕಾದರೆ ಜೆಡಿಎಸ್ ನಲ್ಲಿರುವವರು ಕೊಡಲಿ. ರಾಜೀನಾಮೆ ಕೊಡು ಅಂತ ಕೋರ್ಟ್ ಹೇಳಿದೆಯಾ..? ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡವಾ ಎಂದೇ ಪ್ರಶ್ನೆ ಮಾಡಿದ್ದಾರೆ‌.

ಜಿಟಿ ದೇವೇಗೌಡರು ಸಿದ್ದರಾಮಯ್ಯ ಪರವಾಗಿ ಮಾತನಾಡಿದ್ದಾರೆ. ಮೂಡಾ ಹಗರಣದಲ್ಲಿ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನವರು ತೊಂದರೆಗೆ ಸಿಕ್ಕಿಕೊಳ್ಳಬಾರದು ಎಂದು ಹೇಳಿರಬಹುದು. ಎಫ್ಐಆರ್ ಆದವರೆಲ್ಲಾ ರಾಜೀನಾಮೆ ಕೊಡಬೇಕು ಅಂತ ಹೇಳಲ್ಲ. ಸಿದ್ದರಾಮಯ್ಯ ಅವರಿಗೂ ಹೇಳಿದ್ದೆ. ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಕೊಡಿ ಎಂದು ನಾನು ಕೇಳಿಲ್ಲ. ಎಷ್ಟು ಸಲ ಹೇಳಿದ್ದೀನಿ ನೀವೂ ರಾಜೀನಾಮೆ ಕೊಡಬೇಡಿ ಎಂದು. ಆದರೆ ಅವರು ನಡೆದುಕೊಳ್ಳುತ್ತಿರುವ ರೀತಿಗೆ ಈಗ ಒತ್ತಡ ಹಾಕುತ್ತಿದ್ದೇವೆ ಅಷ್ಟೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment