Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್ ಗೆ VVIP ಭದ್ರತೆ ಕೊಟ್ಟಿದ್ಯಾಕೆ : ಸಚಿವ ಜಿ ಪರಮೇಶ್ವರ್ ಹೇಳಿದ್ದೇನು..?

ಸಚಿವ ಪರಮೇಶ್ವರ್
---Advertisement---

ಬೆಂಗಳೂರು: ನಟ ದರ್ಶನ್ ಡೆವಿಲ್ ಶೂಟಿಂಗ್ ಗೋಸ್ಕರ ಥೈಲ್ಯಾಂಡ್ ಗೆ ಹೋಗಿದ್ರು. ಶೂಟಿಂಗ್ ಮುಗಿದ ಬಳಿಕ ಇಂದು ಬೆಂಗಳೂರಿಗೆ ಬಂದಿಳಿದಿದ್ದಾರೆ. ಈ ವಿಡಿಯೋಗಳು ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗಿವೆ. ಏರ್ಪೋರ್ಟ್ ನಲ್ಲಿದರ್ಶನ್ ಗಾಗಿ ಬಿಗಿ ಭದ್ರತೆಯನ್ನು ಒದಗಿಸಲಾಗಿತ್ತು. ಈ ವಿಚಾರ ಇದೀಗ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ದರ್ಶನ್ ಈಗಾಗಲೇ ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ವಿಚಾರಣೆಯನ್ನ ಎದುರಿಸುತ್ತಿದ್ದಾರೆ. ಹೀಗಿರುವಾಗ ಅವರಿಗೆ ಟೈಟ್ ಸೆಕ್ಯೂರಿಟಿ ಕೊಟ್ಟಿದ್ಯಾಕೆ ಎಂಬ ಪ್ರಶ್ನೆಗಳು ಎದುರಾಗಿವೆ. ಈ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ನನಗೆ ಈ ಬಗ್ಗೆ ಗೊತ್ತಿಲ್ಲ. ಅವರು ಭದ್ರತೆ ಕೊಟ್ಟಿದ್ದಾರಾ ಅತವಾ ಬೇರೆ ರೀತಿ ಮಾಡಿದ್ದಾರಾ ಎಂಬುದು ಗೊತ್ತಿಲ್ಲ. ಅದನ್ನ ವಿಚಾರ ಮಾಡ್ತೀನಿ ಎಂದಿದ್ದಾರೆ. ದೇವನಹಳ್ಳಿ ಏರ್ಪೋರ್ಟ್ ಗೆ ಪತ್ನಿ ಜೊತೆಗೆ ಬಂದಿಳಿದ ನಟ ದರ್ಶನ್ ಗೆ ಅಲ್ಲಿನ ಸಿಬ್ಬಂದಿಗಳು ಭದ್ರತೆಯನ್ನ ಒದಗಿಸಿದ್ದಾರೆ. ನಾಲ್ಕು ಕಡೆಯಿಂದಾನೂ ದರ್ಶನ್ ಅವರಿಗೆ ಸೆಕ್ಯುರಿಟಿ ಕೊಟ್ಟು, ಹೊರಗೆ ಕರೆದುಕೊಂಡು ಬಂದಿದ್ದಾರೆ.

ಹೊರಗಡೆ ಆದ್ರೆ ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ಅನಾಹುತ ನಡೆಯಬಾರದು ಎಂಬ ಕಾರಣಕ್ಕೆ ಸೆಕ್ಯುರಿಟಿ ಕೊಡುವುದರಲ್ಲಿ ಅರ್ಥವಿದೆ. ಆದರೆ ಏರ್ಪೋರ್ಟ್ ನಂಥ ಜಾಗದಲ್ಲಿ ವಿವಿಐಪಿ ಟ್ರೀಟ್ಮೆಂಟ್ ಕೊಟ್ಟಿದ್ಯಾಕೆ ಎಂದು ಪ್ರಶ್ನೆಗಳು ಕೇಳಿ ಬರ್ತಿವೆ. ಸದ್ಯಕ್ಕೆ ದರ್ಶನ್ ಹಾಗೂ ಅವರ ತಂಡದ ವಿಚಾರಣೆ ಸುಪ್ರೀಂ ಕೋರ್ಟ್ ಅಂಗಳದಲ್ಲಿ ಇದೆ. ವಾದ – ಪ್ರತಿವಾದವನ್ನ ಈಗಾಗಲೇ ಕೋರ್ಟ್ ಆಲಿಸಿದೆ. ಇನ್ನೇನಿದ್ದರು ತೀರ್ಪು ನೀಡುವುದೊಂದೆ ಬಾಕಿ. ಮುಂದಿನ ವಾರ ತೀರ್ಪನ್ನ ಕಾಯ್ದಿರಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment