ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ. 28 : ದಾವಣಗೆರೆ ರಸ್ತೆ ಹಾಗೂ ಮೆದೇಹಳ್ಳಿ ರಸ್ತೆಗಳನ್ನು ತುರ್ತಾಗಿ ಅಗಲೀಕರಣಗೊಳಿಸಿ ಪಾದಚಾರಿಗಳ, ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಜಯ ಕರ್ನಾಟಕ ಜನಪರ ವೇದಿಕೆಯಿಂದ ಅಪರ ಜಿಲ್ಲಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಚಳ್ಳಕೆರೆ ರಸ್ತೆಯಿಂದ ಗಾಂಧಿ ವೃತ್ತದ ಮುಖಾಂತರ ಕನಕ ಸರ್ಕಲ್‍ವರೆಗೆ ರಸ್ತೆ ಅಗಲೀಕರಣಕ್ಕೆ ಜಿಲ್ಲಾಧಿಕಾರಿಗಳು ಈಗಾಗಲೆ ಸಭೆ ನಡೆಸಿದ್ದಾರೆ. ಐತಿಹಾಸಿಕ ಏಳು ಸುತ್ತಿನ ಕೋಟೆಗೆ ಪ್ರಸಿದ್ದಿ ಪಡೆದಿರುವ ಚಿತ್ರದುರ್ಗದಲ್ಲಿ ಎಲ್ಲಾ ರಸ್ತೆಗಳು ಕಿಷ್ಕಿಂದೆಯಾಗಿದ್ದು, ಸಂಚಾರಕ್ಕೆ ಕಿರಿಕಿರಿಯಾಗುತ್ತಿರುವುದರಿಂದ ದಾವಣಗೆರೆ ರಸ್ತೆ, ಹೊಳಲ್ಕೆರೆ ರಸ್ತೆ ಹಾಗೂ ಮೆದೆಹಳ್ಳಿ ರಸ್ತೆಗಳನ್ನು ಅಗಲೀಕರಣಗೊಳಿಸಿದರೆ ಊರಿಗೆ ಸುಂದರ ರೂಪ ಕೊಟ್ಟಂತಾಗುತ್ತದೆ. ಇರುವ ರಸ್ತೆಯಲ್ಲಿಯೇ ಪಾದಚಾರಿಗಳು, ಬಸ್, ಲಾರಿ, ಕಾರು, ಆಟೋ, ದ್ವಿಚಕ್ರವಾಹನಗಳು ದಿನನಿತ್ಯವೂ ಸಂಚರಿಸುತ್ತಿವೆ. ತುರ್ತು ಚಿಕಿತ್ಸೆಗಾಗಿ ರೋಗಿಗಳನ್ನು ಸಾಗಿಸುವ ಅಂಬ್ಯುಲೆನ್ಸ್ ವಾಹನ ಚಾಲಕರುಗಳು ಸಂಚಾರ ದಟ್ಟಣೆಯಿಂದ ಪಜೀತಿ ಪಡುತ್ತಿರುವುದು ಸರ್ವೆ ಸಾಮಾನ್ಯವಾಗಿರುವುದರಿಂದ ಈ ವಿಚಾರವನ್ನು ನಿರ್ಲಕ್ಷಿಸದೆ ಕೂಡಲೆ ರಸ್ತೆ ಅಗಲೀಕರಣಗೊಳಿಸುವಂತೆ ಜಿಲ್ಲಾಡಳಿತವನ್ನು ವಿನಂತಿಸಲಾಯಿತು.
ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಬಿ.ಟಿ.ರಾಜೇಂದ್ರ, ಉಪಾಧ್ಯಕ್ಷ ದೇವರಾಜ ಅರಸ್, ಕಾರ್ಯದರ್ಶಿ ಟಿ.ಗಿರೀಶ, ತಾಲ್ಲೂಕು ಕಾರ್ಯಾಧ್ಯಕ್ಷ ನಿರಂಜನ್, ಅಧ್ಯಕ್ಷ ಬಿ.ಅಶೋಕ ಸೇರಿದಂತೆ ವೇದಿಕೆ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್