ಹಾಸನ : ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಆನೆ ನಡೆದದ್ದೇ ದಾರಿ ಎಂಬಂತೆ ಎಲ್ಲೆಂದರಲ್ಲಿ ನುಗ್ಗುತ್ತಿವೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆದ ಬೆಳೆ ನಾಶವಾಗುತ್ತಿದೆ. ಬೆಳ್ಳಂ ಬೆಳಗ್ಗೆಯೇ ಒಟ್ಟಿಗೆ 63 ಕಾಡಾನೆಗಳು ಜಮೀನಿಗೆ ನುಗ್ಗಿದ್ದು ಕಂಡು ಜಮೀನು ಮಾಲೀಕರು ದಂಗಾಗಿದ್ದಾರೆ.
ಈ ಘಟನೆ ನಡೆದಿರೋದು ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಂಬಾರಗಟ್ಟೆಯಲ್ಲಿ ಆನೆಗಳ ಹಿಂಡು ಬೀಡು ಬಿಟ್ಟಿದೆ. ಸುಮಾರು 63 ಆನೆಗಳು ಸಂಪಾಗಿ ಬೆಳೆದ ಗದ್ದೆಗೆ ನುಗ್ಗಿ ಅವಾಂತರ ಸೃಷ್ಟಿಸಿವೆ. ಭತ್ತದ ಬೆಳೆಯನ್ನೆಲ್ಲಾ ನಾಶ ಮಾಡಿವೆ.
ಇಂಥ ಘಟನೆ ನಡೆಯುತ್ತಿರೋದು ಹೊಸದೇನಲ್ಲ. ಆದ್ರೆ ಇದಕ್ಕೊಂದು ಶಾಶ್ವತ ಪರಿಹಾರ ನೀಡುವಂತೆ ರೈತರು ಮನವಿ ಮಾಡಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಈಗ ನಾಶವಾಗಿದೆ. ಆದರೂ ಸರ್ಕಾರವಾಗಲೀ, ಅರಣ್ಯ ಇಲಾಖೆಯಾಗಲೀ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂಬ ನೋವು ರೈತರದ್ದು.