ಬೆಂಗಳೂರು; ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಕೆಲಸ ಮಾಡುತ್ತಿದ್ದು, ಹಲವು ದಿನಗಳಿಂದಾನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಅವರನ್ನೇ ಮುಂದುವರೆಸುತ್ತಾರಾ ಅಥವಾ ಬದಲಾವಣೆಯಾಗುತ್ತಾ ಎಂಬ ಪ್ರಶ್ನೆಗೆ ಇದೀಗ ಬಿವೈ ವಿಜಯೇಂದ್ರ ಅವರೇ ಉತ್ತರಿಸಿದ್ದಾರೆ.
ರಾಜ್ಯ ಸರ್ಕಾರದ ಕಾರ್ಯವೈಖರಿ, ಒಂದು ವಿರೋಧ ಪಕ್ಷವಾಗಿ ನಮಗೂ ಕೂಡ ಬಹಳ ದೊಡ್ಡ ಜವಾಬ್ದಾರಿ ಇದೆ. ಪ್ರಜಾಪ್ರಭುತ್ವಕ್ಕೆ ಆಡಳಿತ ಪಕ್ಷಕ್ಕೆ ಎಷ್ಟು ಜವಾಬ್ದಾರಿ ಇದೆಯೋ ಅದಕ್ಕಿಂತ ಹೆಚ್ಚಿನ ಜವಾಬ್ದಾರಿ ವಿರೋಧ ಪಕ್ಷಕ್ಕೆ ಇದೆ. ನಾವೂ ಕೂಡ ಕಳೆದ ಐದಾರು ತಿಂಗಳಲ್ಲಿ ಪಕ್ಷ ಯಾವ ರೀತಿ ಚಟುವಟಿಕೆಗಳನ್ನ ನಡೆಸ್ತಾ ಇದೆ. ಯಾವ ರೀತಿಯಾಗಿ ಕಾಂಗ್ರೆಸ್ ಸರ್ಕಾರದ ಕರಾಳ ಮುಖವನ್ನು ಜನರ ಮುಂದೆ ಬಿಚ್ಚಿಡ್ತಾ ಇರುವಂತ ಕೆಲಸವನ್ನು ಪಕ್ಷವಾಗಿ ಮಾಡಿದೆ ಎಂಬುದನ್ನು ಕೂಡ ನಾನು ವಿವರಿಸಿದ್ದೇನೆ. ಅದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ.
ರಾಜ್ಯಾಧ್ಯಕ್ಷರಾಗಿ ನಿಮ್ಮನ್ನೇ ಮುಂದುವರೆಸುತ್ತಾರಾ ಎಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಬಿವೈ ವಿಜಯೇಂದ್ರ ಅವರು, ಒಂದೂ ಕಾಲು ವರ್ಷದಿಂದ ಪಕ್ಷದ ಕಾರ್ಯಕರ್ತನಾಗಿ ಕೊಟ್ಟಿರುವ ಜವಾಬ್ದಾರಿಯನ್ನು ಬಹಳ ಶ್ರದ್ದೆಯಿಂದ ನಾನು ಮಾಡಿಕೊಂಡು ಬಂದಿದ್ದೀನಿ. ಪ್ರತಿ ಸಂದರ್ಭದಲ್ಲಿ ಕೂಡ ನನಗೆ ಮಾಹಿತಿ ಬಂದಾಗ ಕೇಂದ್ರಕ್ಕೆ ಕೊಡಬೇಕು. ನಮ್ಮದು ರಾಷ್ಟ್ರೀಯ ಪಕ್ಷ ಎಲ್ಲಾ ಜಿಲ್ಲೆಯ ಅಧ್ಯಕ್ಷರ ಅಭಿಪ್ರಾಯ ಪಡೆದು, ಪಕ್ಷದ ಮುಖಂಡರ ಅಭಿಪ್ರಾಯ ಪಡೆದು, ಆಮೇಲೆ ಏನಾಗಬೇಕು, ಯಾರನ್ನ ಮಾಡಿದರೆ ಒಳ್ಳೆಯದಾಗುತ್ತೆ ಎಂಬುದನ್ನ ಚರ್ಚೆ ಮಾಡಿ ತೀರ್ಮಾನಿಸುತ್ತಾರೆ. ಎಲ್ಲವೂ ಒಳ್ಳೆಯದೇ ಆಗುತ್ತೆ ಎಂದು ನಂಬಿದ್ದೇನೆ ಎಂದಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






