Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ದರ್ಶನ್ ಗೆ ಜಾಮೀನು ಸಿಗುತ್ತಾ ? ಸುಪ್ರೀಂ ಕೋರ್ಟ್ ತೀರ್ಪಿನತ್ತ ಚಿತ್ತ

---Advertisement---

 

ಬೆಂಗಳೂರು: ದರ್ಶನ ವಿರುದ್ಧ ದಾಖಲಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿಗೆ ಮೇ 15 ಮಹತ್ವದ ದಿನವಾಗಿದ್ದು, ನಟನ ಜಾಮೀನು ಭವಿಷ್ಯ ಏನಾಗಲಿದೆ ಎಂಬ ಕುತೂಹಲ ಹೆಚ್ಚಿದೆ.
ಪ್ರಕರಣದ ವಿಚಾರಣೆ ಸೆಷನ್ಸ್ ಕೋರ್ಟ್‌ನಲ್ಲಿ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಆರೋಪಿಸಿರುವ ದರ್ಶನ್, ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. 273 ಸಾಕ್ಷಿದಾರರ ಪೈಕಿ ಇದುವರೆಗೆ ಕೇವಲ 10 ಮಂದಿಯ ವಿಚಾರಣೆಯೂ ಪೂರ್ಣಗೊಂಡಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಸುಮಾರು ಎಂಟು ತಿಂಗಳಿಂದ ಜೈಲಿನಲ್ಲಿರುವುದಾಗಿ ಹೇಳಿರುವ ದರ್ಶನ್, ಕಾರಾಗೃಹದಲ್ಲಿನ ಪರಿಸ್ಥಿತಿಗಳ ಬಗ್ಗೆ ಸಹ ಅರ್ಜಿಯಲ್ಲಿ ಪ್ರಸ್ತಾಪಿಸಿದ್ದಾರೆ. “ಸಹ ಕೈದಿಗಳಿಂದ ಬೆದರಿಕೆ ಸಾಧ್ಯತೆ ಇದೆ. ಕನಿಷ್ಠ ಸೌಲಭ್ಯಗಳನ್ನೂ ನೀಡಲಾಗುತ್ತಿಲ್ಲ” ಎಂದು ಅವರು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕಾರಾಗೃಹ ಇಲಾಖೆ ಹಾಗೂ ಪ್ರಕರಣದ ತನಿಖೆ ಸಂಬಂಧಿತ ಅಧಿಕಾರಿಗಳಿಂದ ವರದಿ ಸಲ್ಲಿಸಲು ಸೂಚಿಸಿತ್ತು. ಅದರಂತೆ ರಾಜ್ಯ ಸರ್ಕಾರದ ವಿಶೇಷ ಸರ್ಕಾರಿ ಅಭಿಯೋಜಕರ (SPP) ಮೂಲಕ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಕೆಯಾಗಿದೆ.

ವರದಿಯಲ್ಲಿ ದರ್ಶನ್ ಆರೋಪಗಳಿಗೆ ಉತ್ತರ ನೀಡಿರುವ ಅಧಿಕಾರಿಗಳು, “ಜೈಲಿನಲ್ಲಿ ದರ್ಶನ್ ಅವರಿಗೆ ಇತರ ಕೈದಿಗಳೊಂದಿಗೆ ನೇರ ಸಂಪರ್ಕವಿಲ್ಲ. ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಸಿಸಿಟಿವಿ ದೃಶ್ಯಾವಳಿ ಸಹ ಲಭ್ಯವಿದೆ” ಎಂದು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.ನಾಳೆ ನಡೆಯಲಿರುವ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದರ ಮೇಲೆ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗುವ ಸಾಧ್ಯತೆ ಇದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದ ಗಮನ ಇದೀಗ ದೆಹಲಿಯತ್ತ ನೆಟ್ಟಿಚಿತ್ತ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now