Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಬಿಜೆಪಿ ಸೇರಲಿರುವ ಡಾ. ಮಂಜುನಾಥ್ : ಬೆಂಗಳೂರು ಗ್ರಾಮಾಂತರ ಫಿಕ್ಸ್ ..?

---Advertisement---

 

ಬೆಂಗಳೂರು: ಲೋಕಸಭಾ ಚುನಾವಣೆಗೆ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದ್ದು, ರಾಜ್ಯದಲ್ಲಿ ಒಂದಷ್ಟು ಕ್ಷೇತ್ರಗಳ ಕಾಂಪಿಟೇಷನ್ ಜಾಸ್ತಿಯಾಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಕೂಡ ಒಂದು. ಕಾಂಗ್ರೆಸ್ ನ ಡಿ ಕೆ ಸುರೇಶ್ ಅವರನ್ನು ಸೋಲಿಸುವುದಕ್ಕಾಗಿ ಬೆಂಗಳೂರು ಗ್ರಾಮಾಂತರದಲ್ಲಿ ಸ್ಟ್ರಾಂಗ್ ಎನಿಸುವ ಕ್ಯಾಂಡಿಡೇಟ್ ನೇ ಹಾಕಬೇಕಾಗಿದೆ‌. ಹೀಗಾಗಿ ಡಾ. ಮಂಜುನಾಥ್ ಅವರನ್ನು ಚುನಾವಣೆಗೆ ನಿಲ್ಲಿಸುವ ಪ್ರಯತ್ನ ನಡೆದಿದೆ‌. ಅವರನ್ನು ಮನವೊಲಿಸುವ ಪ್ರಯತ್ನವೂ ಈಗಾಗಲೇ ಸಕ್ಸಸ್ ಆಗಿದೆ.

ಡಾ. ಮಂಜುನಾಥ್ ನಾಳೆ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಬಿಜೆಪಿಯಿಂದ ಇನ್ನು ಅಧಿಕೃತವಾಗಿ ಟಿಕೆಟ್ ಘೋಷಣೆಯಾಗಿಲ್ಲ. ಆದರೆ ಇಂದು ಸಂಜೆಯಿಂದಾನೇ ರಾಜರಾಜೇಶ್ವರಿ ನಗರದಿಂದ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ. ಅದಕ್ಕಾಗಿ ಬಿಜೆಪಿ ಬ್ಯಾನರ್ ಹಾಕಿಸಿ, ಬೆಂಬಲಕ್ಕೆ ನಿಂತಿದ್ದಾರೆ.

ಡಾ. ಮಂಜುನಾಥ್ ಅವರ ರಾಜಕೀಯ ಪ್ರವೇಶ ಬೇಡ ಎಂದು ದೇವೇಗೌಡರು ಹೇಳಿದ್ದರು. ಆದರೆ ಈಗ ಎಲ್ಲರ ಮನವಿ ಮೇರೆಗೆ ಡಾ. ಮಂಜುನಾಥ್ ರಾಜಕೀಯ ಪ್ರವೇಶ ಮಾಡುತ್ತಿದ್ದಾರೆ. ಇತ್ತಿಚೆಗಷ್ಟೇ ಜಯದೇವ ಆಸ್ಪತ್ರೆಯಿಂದ ನಿವೃತ್ತಿ ಪಡೆದಿದ್ದಾರೆ. ಇಡೀ ದೇಶದಾದ್ಯಂತ ಜಯದೇವ ಆಸ್ಪತ್ರೆ ಮೂಲಕ ಹೆಸರು ಮಾಡಿದ್ದಾರೆ. ಜಯದೇವ ಆಸ್ಪತ್ರೆಯ ಹೆಸರು ದೊಡ್ಡ ಮಟ್ಟಕ್ಕೆ ಹೋಗುವುದರಲ್ಲಿ ಡಾ. ಮಂಜುನಾಥ್ ಅವರ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ದೇವೇಗೌಡ ಅವರು ಮಂಜುನಾಥ್ ಅವರ ರಾಜಕೀಯ ಪ್ರವೇಶಕ್ಕೆ ಸಮ್ಮತಿ ನೀಡಿರಲಿಲ್ಲ. ರಾಜಕೀಯದಳಸಾಕಷ್ಟು ಏಳು-ಬೀಳು ಇರುತ್ತದೆ. ಸೋಲು-ಗೆಲುವು ಎದುರಿಸಬೇಕಾಗುತ್ತದೆ. ಹೀಗಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಡಾ. ಮಂಜುನಾಥ್ ಅವರ ರಾಜಕೀಯ ಪ್ರವೇಶ ಬೇಡ ಎಂದಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment