Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬಿಗ್ ಬಾಸ್ ಮನೆಗೆ ಜಗ್ಗೇಶ್ ಹೋಗ್ತಾರಾ..? ಅಭಿಮಾನಿಗಳಿಗೆ ನವರಸ ನಾಯಕ ಹೇಳಿದ್ದೇನು..?

---Advertisement---

 

ಬೆಂಗಳೂರು: ಬಿಗ್ ಬಾಸ್ ಸೀಸನ್ 10 ಗಾಗಿ ಇಡೀ ಕರ್ನಾಟಕದ ರಿಯಾಲಿಟಿ ಶೋ ಪ್ರೇಮಿಗಳು ಕಾಯುತ್ತಿದ್ದಾರೆ. ಈ ಬಾರಿಯ ಸೀಸನ್ ಡಿಫ್ರೆಂಟ್ ಎಂದೇ ಹೇಳಲಾಗುತ್ತಿದೆ. ಹೀಗಾಗಿ ಎಲ್ಲರ ಚಿತ್ತ ಬಿಗ್ ಬಾಸ್ ಸೀಸನ್ 10 ರ ಕಡೆಗೆ ನೆಟ್ಟಿದೆ. ಅಕ್ಟೋಬರ್ 10 ಬಿಗ್ ಬಾಸ್ ಎಲ್ಲರ ಮನೆ ಮನಗಳಲ್ಲಿ ಆರಂಭವಾಗಲಿದೆ.

ಇನ್ನು ಈ ಬಾರಿಯ ಬಿಗ್ ಬಾಸ್ ಗೆ ಯಾರೆಲ್ಲಾ ಹೋಗುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಊಹೆ ಮಾಡುವುದಕ್ಕೂ ಶುರು ಮಾಡಿದ್ದಾರೆ. ಆದರೆ ಅಧಿಕೃತವಾಗಿ ಇನ್ನು ಯಾರೆಲ್ಲಾ ಹೋಗ್ತಾರೆ ಎಂಬುದು ಮಾತ್ರ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಇದರ ನಡುವೆ ನವರಸ ನಾಯಕ ಜಗ್ಗೇಶ್ ಕೂಡ ಈ ಬಾರಿಯ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡ್ತಾರೆ ಎಂದೇ ಹೇಳಲಾಗಿತ್ತು. ಆದರೆ ಅದಕ್ಕೆ ಇದೀಗ ನಟ ಜಗ್ಗೇಶ್ ಅವರೇ ಉತ್ತರ ನೀಡಿದ್ದಾರೆ.

ನಟ ಜಗ್ಗೇಶ್ ಅವರು ಬಿಗ್ ಬಾಸ್ ಗೆ ಹೋಗಲಿದ್ದಾರೆ ಎಂದು ಗೊತ್ತಾಗಿದ್ದೆ ತಡ ಅಭಿಮಾನಿಗಳು ತುಂಬಾನೇ ಖುಷಿಯಾಗಿದ್ದರು. ಬಿಗ್ ಬಾಸ್ ಮನೆಯಲ್ಲಿ ತಮ್ಮ ನೆಚ್ಚಿನ ನಟನನ್ನು ನೋಡುವ ಬಯಕೆ ವ್ಯಕ್ತಪಡಿಸಿದ್ದರು. ಆದರೆ ಆ ಆಸೆಗೆ ನಟ ಜಗ್ಗೇಶ್ ಅವರೇ ನಿರಾಸೆಯ ಪರದೆ ಎಳೆದಿದ್ದಾರೆ. ಟ್ವಿಟ್ಟರ್ ನಲ್ಲಿ ಉತ್ತರಿಸಿರುವ ನಟ ಜಗ್ಗೇಶ್, ಸತ್ಯಕ್ಕೆ ದೂರವಾದ ವಿಷಯ.. ನನ್ನ ಅಭಿಮಾನಿಗಳ ಮಾಹಿತಿಗಾಗಿ ಎಂದು ಬರೆದಿದ್ದಾರೆ. ಈ ಮೂಲಕ ತಾವೂ ಬಿಗ್ ಬಾಸ್ ಗೆ ಹೋಗುತ್ತಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಆದ್ರೆ ಜಗ್ಗೇಶ್ ಬಿಗ್ ಬಾಸ್ ಮನೆಗೆ ಹೋಗುತ್ತಾರೆ ಎಂಬ ಗಾಳಿ ಸುದ್ದಿಗೇನೆ ಅಭಿಮಾನಿಗಳೆಲ್ಲಾ ವಿಶ್ ಮಾಡುವುದಕ್ಕೆ ಶುರು ಮಾಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...