ಈ ಬಾರಿ ಆರ್ಸಿಬಿ ಮಹಿಳೆಯರ ತಂಡ ಗೆಲುವು ಕಂಡು ಕಪ್ ಎತ್ತಿಕೊಂಡು ಬಂದಿದೆ. ಆದರೆ ಪುರುಷರ ಟೀಂ ಮಾತ್ರ ಅಭಿಮಾನಿಗಳಿಗೆ ಬೇಸರ ಮಾಡುತ್ತಲೆ ಇದೆ. 17ನೇ ಆವೃತ್ತಿಯಲ್ಲಿ ಈಗಾಗಲೇ ನಾಲ್ಕು ಪಂದ್ಯಗಳನ್ನು ಸೋತಿದೆ. ಇದೀಗ ಏಪ್ರಿಲ್ 11ರಂದು ನಡೆಯುವ ಹೈವೋಲ್ಟೇಜ್ ಪಂದ್ಯದಲ್ಲಿ ಹಲವು ಬದಲಾವಣೆಗಳು ನಡೆಯಲಿವೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆರ್ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡ ಮುಖಾಮುಖಿಯಾಗಲಿವೆ. ಮುಂಬೈ ವಿರುದ್ಧ ಗೆಲ್ಲಲೇಬೇಕಾದ ಅನಿವಾರ್ಯತೆ ಆರ್ಸಿಬಿ ತಂಡಕ್ಕೆ ಇದೆ. ಹೀಗಾಗಿ ತಂಡದಲ್ಲಿ ಒಂದಷ್ಟು ಬದಲಾವಣೆಯನ್ನು ತರಲು ಹೊರಟಿದೆ.
ಆರ್ಸಿಬಿ ಸ್ಟಾರ್ ಆಟಗಾರರೇ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಅದರಲ್ಲೂ ಸ್ಟಾರ್ ಆಲ್ರೌಂಡರ್ ಮ್ಯಾಕ್ಸಿ ಕಳೆದ 5 ಪಂದ್ಯಗಳಲ್ಲೂ ಕಳಪೆ ಪ್ರದರ್ಶನ ನೀಡಿದ್ದು, ಕೇವಲ 32 ರನ್ ಗಳಿಸಿದ್ದಾರೆ. ಹಾಗಾಗಿ ಆರ್ಸಿಬಿ ಮ್ಯಾಕ್ಸ್ವೆಲ್ ಅವರನನ್ನು ಕೈ ಬಿಟ್ಟು, ಕನ್ನಡಿಗೆ ವೈಶಾಕ್ ವಿಜಯ್ ಕುಮಾರ್ಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










