ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 21 : ಒಳ ಮೀಸಲಾತಿ ಜಾರಿಗೊಳಿಸದೆ ಒಂದೆ ಒಂದು ಹುದ್ದೆಯನ್ನು ತುಂಬಲು ಬಿಡುವುದಿಲ್ಲ. ಈ ಸಂಬಂಧ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ಬುಧವಾರ ನಿಯೋಗ ಹೊರಟು ಮನವಿ ಸಲ್ಲಿಸಲಾಗುವುದೆಂದು ಮಾಜಿ ಸಚಿವ ಹೆಚ್.ಆಂಜನೇಯ ತಿಳಿಸಿದರು.
ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಒಳ ಮೀಸಲಾತಿಗೆ ಸಂಬಂಧಿಸಿದಂತೆ ಏ.24 ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಯುತ್ತಿದೆ. 56432 ಹುದ್ದೆಗಳನ್ನು ಭರ್ತಿ ಮಾಡುವುದಕ್ಕೂ ಮುನ್ನ ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಿ ನಮಗೆ ಸಿಗಬೇಕಾದ ಪಾಲು ಕೊಡುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕೇಳುತ್ತೇವೆ. 121 ಕೃಷಿ ಅಧಿಕಾರಿಗಳು ಹಾಗೂ 769 ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿಗೆ ರಾಜ್ಯ ಸರ್ಕಾರ ನೋಟಿಫಿಕೇಷನ್ ಹೊರಡಿಸಿರುವುದು ಕೂಡ ನಮ್ಮ ಜನಾಂಗದ ನಿರುದ್ಯೋಗಿಗಳಿಗೆ ಅನ್ಯಾಯವಾಗುತ್ತಿದೆ. ಒಳ ಮೀಸಲಾತಿ ಜಾರಿಗೊಳಿಸಿದ ನಂತರವೇ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿ ನಮ್ಮದೇನು ತಕರಾರಿಲ್ಲ ಎಂದು ಹೇಳಿದರು.
ಒಳ ಮೀಸಲಾತಿಗಾಗಿ 35 ವರ್ಷಗಳಿಂದಲೂ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಬೇರೆ ಬೇರೆ ರಾಜ್ಯಗಳಲ್ಲಿ ಈಗಾಗಲೆ ಒಳ ಮೀಸಲಾತಿ ಜಾರಿಯಾಗಿದೆ. ಇತರೆ ಸಮುದಾಯಗಳ ಜೊತೆ ನಮ್ಮ ಜನಾಂಗ ಸ್ಪರ್ಧಿಸುವುದು ಕಷ್ಟ. ಅವಕಾಶದಿಂದ ವಂಚಿತರಾಗಿದ್ದೇವೆ. ಶುಕ್ರವಾರ ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾರ ಮಾತು ಕೇಳದೆ ನಮಗೆ ನ್ಯಾಯ ಕೊಡಬೇಕೆಂದು ಒತ್ತಾಯಿಸುವುದಕ್ಕಾಗಿ ನಿಯೋಗ ಹೊರಟಿದ್ದೇವೆ. ಬೇರೆಯವರಿಗೂ ನಮ್ಮಿಂದ ತೊಂದರೆಯಾಗಬಾರದೆಂದರು.
ಎಲ್ಲಾ ಹುದ್ದೆಗಳ ನೇಮಕಕ್ಕೆ ಹೊರಡಿಸಿರುವ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಕೂಡಲೆ ನಿಲ್ಲಿಸಬೇಕು. ಒಳ ಮೀಸಲಾತಿಯಿಂದ ಉದ್ಯೋಗ ಶಿಕ್ಷಣಕ್ಕೆ ಅನುಕೂಲವಾಗುತ್ತದೆ. ಯಾರು ಆಂತಕ ಪಡುವುದು ಬೇಡ. ಬಡ್ತಿಯಲ್ಲಿ ಒಳ ಮೀಸಲಾತಿ ಅನ್ವಯವಾಗಬೇಕು. ಆಂಧ್ರ, ತೆಲಂಗಾಣ ಮಾದರಿಯಂತೆ ನಮ್ಮ ರಾಜ್ಯದಲ್ಲಿಯೂ ಒಳ ಮೀಸಲಾತಿ ನೀಡಬೇಕು. ಕತ್ತಲೆಯಲ್ಲಿರುವುದರಿಂದ ನಮ್ಮಗಳ ಕಣ್ಣೀರೊರೆಸುವ ಕೆಲಸವನ್ನು ರಾಜ್ಯದ ಮುಖ್ಯಮಂತ್ರಿ ಮಾಡುತ್ತಾರೆಂಬ ನಂಬಿಕೆಯಿದೆ. ಎರಡು ಸದನದಲ್ಲೂ ಒಳ ಮೀಸಲಾತಿಗೆ ಒಪ್ಪಿಗೆಯಾಗಿದೆ. ಹಂಚಿಕೆಯಾಗುವುದೊಂದೆ ಬಾಕಿ. ರಾಜ್ಯ ಸರ್ಕಾರ ಮೀನಾಮೇಷ ಎಣಿಸುವುದು ಬೇಡ. ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕೊಡಲಿ ಎಂದು ಹೆಚ್.ಆಂಜನೇಯ ಮನವಿ ಮಾಡಿದರು.
ಕಿರಣ್, ನ್ಯಾಯವಾದಿ ರವಿ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










