ತುಮಕೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಸ್ಥಾನ ವಿಚಾರ ಚರ್ಚೆಯಾಗುತ್ತಲೇ ಇರುತ್ತದೆ. ಒಮ್ಮೊಮ್ಮೆ ದಲಿತಬಸಿಎಂ ವಿಚಾರವೂ ಸದ್ದು ಮಾಡುತ್ತಾ ಇರುತ್ತೆ. ಇದೀಗ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂಬ ಮಾತು ಕೇಳಿ ಬರುತ್ತಾ ಇದೆ.
ಸಿಎಂ ಸ್ಥಾನಕ್ಕೆ ಈ ಬಾರಿ ಸಚಿವ ಸತೀಶ್ ಜಾರಕಿಹೊಳಿ ಹೆಸರು ಪ್ರಸ್ತಾಪವಾಗಿದೆ. ಸಚಿವ ಕೆ ಎನ್ ರಾಜಣ್ಣ ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ನಮ್ಮ ಸಮಾಜಕ್ಕೆ ಸಿಎಂ ಸ್ಥಾನ ಸಿಗಬೇಕು ಎಂಬುದು ಅಭಿಲಾಷೆ ಹೀಗಾಗಿ ನಮ್ಮ ಸಮಾಜದಿಂದ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾಗಬೇಕು ಎಂದು ಸಹಕಾರಿ ಸಚಿವ ಕೆ ಎನ್ ರಾಜಣ್ಣ ಹೇಳಿದ್ದಾರೆ.
ಇನ್ನು ಸತೀಶ್ ಜಾರಕಿಹೊಳಿ ಅವರು ಕೂಡ ಮುಖ್ಯಮಂತ್ರಿಯಾಗುವ ಬಗ್ಗೆ ತಮ್ಮ ಅಭಿಲಾಷೆಯನ್ನು ವ್ಯಕ್ತಪಡಿಸಿದ್ದಾರೆ. ಈಗಲೇ ಮುಖ್ಯಮಂತ್ರಿಯಾಗುವುದು ಅಲ್ಲ. ಮುಂದಿನ ಅವಧಿಯಲ್ಲಿ ಮುಖ್ಯಮಂತ್ರಿ ಆಗೋಣಾ ಎಂದು ಹೇಳುವ ಮೂಲಕ ತಾವೂ ಕೂಎ ಸಿಎಂ ಆಕಾಂಕ್ಷಿ ಎಂದು ತೋರಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











