
ಮೈಸೂರು: 2023 ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಈಗಾಗಲೇ ಚುನಾವಣೆಗೆ ಬೇಕಾದ ಎಲ್ಲಾ ಸಿದ್ದತೆಗಳನ್ನು ರಾಜಕೀಯ ಪಕ್ಷಗಳು ಶುರು ಮಾಡಿವೆ. ಇನ್ನು ಸಿದ್ದರಾಮಯ್ಯ ಈಗಾಗಲೇ ಕೋಲಾರದಿಂದ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದಾರೆ. ಅದರ ಭಾಗವಾಗಿಯೇ ಕೋಲಾರದಲ್ಲಿ ಓಡಾಡುತ್ತಾ ಪ್ರಚಾರ ನಡೆಸುತ್ತಿದ್ದಾರೆ.

ಆದ್ರೆ ಕೋಲಾರದ ಸ್ಪರ್ಧೆಯ ಬಗ್ಗೆ ಪಾಸಿಟಿವ್ ಅಭಿಪ್ರಾಯಕ್ಕಿಂತ ನೆಗೆಟಿವ್ ಅಭಿಪ್ರಾಯ ಬಂದಿದ್ದೆ ಹೆಚ್ಚಾಗಿದೆ. ಕೋಲಾರದಲ್ಲಿ ಸಿದ್ದರಾಮಯ್ಯ ನಿಲ್ಲುವುದು ಸೇಫ್ ಅಲ್ಲ ಅಂತಾನೆ ಹಲವರು ಹೇಳಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಕೋಲಾರ ಬಿಟ್ಟು ಮತ್ತೆ ವರುಣಾ ಕ್ಷೇತ್ರಕ್ಕೆ ವಾಪಸ್ ಆಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಈ ಬಗ್ಗೆ ಇಂದು ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಲ್ಲಿ ನಿಂತರೆ ಸುಲಭವಾಗಿ ಗೆಲ್ಲಬಹುದು. ಆದರೆ ಮಗನ ಭವಿಷ್ಯಕ್ಕಾಗಿ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಈಗ ಯತೀಂದ್ರ ಸಿದ್ದರಾಮಯ್ಯ ಕೂಡ ಅದನ್ನೇ ಹೇಳಿದ್ದಾರೆ. ನಾನು ವರುಣಾ ಕ್ಷೇತ್ರದಿಂದಾನೇ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ನಮ್ಮ ತಂದೆಯವರು ಈಗಾಗಲೇ ಕೋಲಾರ ಕ್ಷೇತ್ರದಿಂದಾನೇ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಿಸಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರು ಕೋಲಾರದಿಂದಾನೇ ಸ್ಪರ್ಧೆ ಮಾಡುವುದು ಖಚಿತವಾಗಿದೆ. ನಾನು ವರುಣಾ ಕ್ಷೇತ್ರದ ಅಭ್ಯರ್ಥಿ ಎಂದು ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಸುಮ್ಮನೆ ಕೋಲಾರ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ ಮತ್ತೆ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಲೆದಿದ್ದಾರೆ.

GIPHY App Key not set. Please check settings