ಶಾಲೆಗಳು ಆರಂಭವಾಗುವ ಸಮಯ ಬಂದಿದೆ. ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ನೀಡುವಂತ ಸಮಯ. ಆದ್ರೆ ಕಳೆದ ಬಾರಿ ಬಿಜೆಪಿ ಸರ್ಕಾರ ಆಡಳಿತಾವಧಿಯಲ್ಲಿ ಒಂದಷ್ಟು ಪಠ್ಯ ಪುಸ್ತಕ ಬದಲಾವಣೆಗಳಾಗಿತ್ತು. ಅದು ವಿವಾದಕ್ಕೂ ಕಾರಣವಾಗಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮತ್ತೆ ಆ ಪಠ್ಯ ಪುಸ್ತಕಗಳ ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇಂದು ನಡೆದ ಐಎಎಸ್ ಅಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಪಠ್ಯ ಪುಸ್ತಕದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದ್ದಾಗ ಪ್ರೊ. ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಪಠ್ಯಪುಸ್ತಕ ರಚನಾ ಸಮಿತಿ ಮಾಡಲಾಗಿತ್ತು. ಆ ಸಮಿತಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿತ್ತು. ಬರಗೂರು ರಾಮಚಂದ್ರಪ್ಪ ಸಮಿತಿಯು ಪಠ್ಯ ಪರಿಷ್ಕರಣೆ ವೇಳೆ ಕೆಲವೊಂದು ಲೋಪ ದೋಷಗಳನ್ನು ಮಾಡಿದೆ ಎಂದು ನಂತರ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಸರ್ಕಾರ ಆಕ್ಷೇಪಿಸಿತ್ತು.
ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ರಚಿಸಿತ್ತು. ಚಕ್ರತೀರ್ಥ ನೇತೃತ್ವದ ಸಮಿತಿ 6 ರಿಂದ 10ನೇ ತರಗತಿವರೆಗಿನ ಸಮಾಜ ವಿಜ್ಞಾನ ಪಠ್ಯ ಪುಸ್ತಕ, 6 ರಿಂದ 10ನೇ ತರಗತಿವರೆಗಿನ ಕನ್ನಡ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿತ್ತು. 3ನೇ ತರಗತಿಯ ಪರಿಸರ ಅಧ್ಯಯನ ಪಠ್ಯ ಪುಸ್ತಕಗಳ ಪರಿಷ್ಕರಣೆಯನ್ನೂ ಮಾಡಿತ್ತು.





GIPHY App Key not set. Please check settings