ಮಂಡ್ಯ: ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು ಕಾಂಗ್ರೆಸ್ ತೊರೆದು ಬಿಜೆಪಿಯಲ್ಲಿ ಆಕ್ಟೀವ್ ಆಗಿದ್ದಾರೆ. ಇವರ ಸಾರಥ್ಯ ಬಿಜೆಪಿ ಗೆಲುವಿಗೆ ಬಹಳ ಮುಖ್ಯವಾಗಿದೆ. ಆದರೆ ಕೃಷ್ಣ ಅವರು ಆಡಿದ ಮಾತುಗಳು ಈಗ ರಾಜಕೀಯ ವಲಯದಲ್ಲಿ ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಸದ್ಯ ಬಿಜೆಪಿ ಪಕ್ಷ ಹಳೆ ಮೈಸೂರು ಭಾಗವನ್ನು ಟಾರ್ಗೆಟ್ ಮಾಡಿಕೊಂಡಿದೆ. ಜೆಡಿಎಸ್ ಭದ್ರಕೋಟೆಯಾಗಿರುವ ಹಳೆ ಮೈಸೂರು ಭಾಗವನ್ನು ಈ ಬಾರಿ ಹೇಗಾದರೂ ಮಾಡಿ, ಕಬಳಿಸಬೇಕೆಂದು ಅಲ್ಲಿಯೇ ಬೃಹತ್ ವೇದಿಕೆಯಾಕಿ, ಜನಸಂಕಲ್ಪ ಯಾತ್ರೆಯನ್ನು ಮಾಡಿ ಆಗಿದೆ.
ಈ ಭಾಗದಲ್ಲಿ ಎಸ್ ಎಂ ಕೃಷ್ಣ ಅವರು ಕೂಡ ತಮ್ಮ ಹಿಡಿತವನ್ನು ಸಾಧಿಸಿದ್ದಾರೆ. ಎಸ್ ಎಂ ಕೃಷ್ಣ ಅವರು ಸ್ವಲ್ಪ ಓಡಾಡಿದ್ದರೆ ಕಮಲವನ್ನು ಅರಳಿಸುವುದು ಕಷ್ಟವೇನು ಇರಲಿಲ್ಲ. ಆದರೆ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಎಸ್ ಎಂ ಕೃಷ್ಣ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ.
ಮಂಡ್ಯದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕೀಯದಿಂದ ನಾನು ನಿವೃತ್ತಿಯಾಗಿ ಸುಮಾರು ದಿನಗಳೇ ಕಳೆದಿವೆ. ಆ ನಿಲುವನ್ನೇ ಈಗ ನಾನು ಮುಂದುವರೆಸಿಕೊಂಡು ಹೋಗುತ್ತೇನೆ ಎಂದು ಹೇಳಿದ್ದಾರೆ. ಇದು ಬಿಜೆಪಿ ನಾಯಕರಿಗೆ ನಡುಕ ಹುಟ್ಟುಹಾಕಿದ್ದು, ಕೃಷ್ಣ ಅವರ ನಡೆ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಪ್ಲಸ್ ಪಾಯಿಂಟ್ ಆಗುವುದರಲ್ಲಿ ನೋ ಡೌಟ್ ಎನ್ನಲಾಗುತ್ತಿದೆ.